

ಚಿತ್ರದುರ್ಗ: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ-ಹಂತವಾಗಿ ಸೇವೆ ಕಾಯಂ ಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರು ಒನಕೆ ಓಬವ್ವ ವೃತ್ತ ಮುಂಭಾಗಲ್ಲಿ ಬುಧವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಮುಂದಾಗಿರುವ ಸರ್ಕಾರ ಹೊರಗುತ್ತಿಗೆ ಆಧಾರದಲ್ಲಿ ವಿವಿಧ ರೀತಿ ಕರ್ತವ್ಯ ನಿರ್ವಹಿಸುವ 15 ಸಾವಿರಕ್ಕೂ ಹೆಚ್ಚು ನೌಕರರಿಗೆ ತಾರತಮ್ಯ ಮಾಡುತ್ತಿದ್ದು, ನಮ್ಮನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾಧ್ಯಕ್ಷ ಎಂ.ಆರ್.ಶಿವರಾಜ್, ತಾಲೂಕು ಅಧ್ಯಕ್ಷ ಟಿ.ನವೀನ್‌ಕುಮಾರ್, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಲೇಖಕ ಆನಂದ್ ಇತರರಿದ್ದರು.