

ಜಗಳೂರು: ಹೊರಗುತ್ತಿಗೆ ನೌಕರಿ ಕಾಯಂ, ಸ್ಥಳೀಯ ಆಡಳಿತದಿಂದಲೇ ವೇತನ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ವಿುಕರು ಕೆಲಸ ಬಹಿಷ್ಕರಿಸಿ ಪಟ್ಟಣ ಪಂಚಾಯಿತಿ ಎದುರು ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ಪೌರಕಾರ್ವಿುಕ ಸಂಘದ ತಾಲೂಕಾಧ್ಯಕ್ಷ ಸಿ. ಚಿನ್ನಪ್ಪ ಮಾತನಾಡಿ, ಸರ್ಕಾರ ವಿವಿಧ ಯೋಜನೆಗಳಿಗೆ ಸಾಕಷ್ಟು ಅನುದಾನ ನೀಡುತ್ತದೆ. ಆದರೆ ನಗರ ಸ್ವಚ್ಛಗೊಳಿಸುವ ಪೌರಕಾರ್ವಿುಕರ ಬೇಡಿಕೆ ಈಡೇರಿಸದೇ ನಿರ್ಲಕ್ಷ ತೋರಿದೆ ಎಂದು ದೂರಿದರು.
ಪೌರನೌಕರರು, ನೀರು ಸರಬರಾಜು ಸಿಬ್ಬಂದಿ ಹಾಗೂ ಕಚೇರಿಯ ಎಲ್ಲ ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸುವ ವರೆಗೆ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದಲ್ಲಿರುವ ಮಹಾನಗರಪಾಲಿಕೆ, ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಸುವಂತೆ ರಾಜ್ಯ ಜಂಟಿ ಕಾರ್ಯದರ್ಶಿಗಳಿಗೆ ಪತ್ರದಲ್ಲಿ ತಿಳಿಸಲಾಗಿದೆ.
ಬೇಡಿಕೆಗಳನ್ನು ಈಡೇರಿಸುವ ತನಕ ಕೆಲಸ ಸ್ಥಗಿತಗೊಳಿಸಿ ನಾವು ಶಾಂತಿಯುತವಾಗಿ ಪಪಂ ಕಚೇರಿ ಆವರಣದಲ್ಲೇ ಪ್ರತಿಭಟನೆ ಮುಂದುವರೆಸುತ್ತೇವೆ ಎಂದರು.
ನಂತರ ಶಾಸಕ ಬಿ. ದೇವೇಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಪೌರ ಕಾರ್ವಿುಕರ ಸಮಸ್ಯೆಗಳ ಬಗ್ಗೆ ಸಿಎಂ ಮತ್ತು ಡಿಸಿಎಂ ಹಾಗೂ ಸಂಬಂಧಿಸಿದ ಸಚಿವರ ಜತೆ ರ್ಚಚಿಸಿ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಆರೋಗ್ಯ ನಿರೀಕ್ಷಕ ಪ್ರಶಾಂತ್, ನೂರುಲ್ಲಾ ಷರೀಪ್, ಬಸವರಾಜಪ್ಪ, ತಿಪ್ಪೇಸ್ವಾಮಿ, ಅಣ್ಣಪ್ಪ, ಸೋಮಶೇಖರ್ ನಾಯ್್ಕ ಬಸಪ್ಪ, ಮದಕರಿನಾಯ್್ಕ ಆರ್.ನಾಗರಾಜ್ ಮತ್ತಿತರರಿದ್ದರು.
ಬೇಡಿಕೆಗಳೇನು: 1. ನಗರ ಸ್ಥಳೀಯ ಸಂಸ್ಥೆಗಳಲ್ಲಿ ದೊರಕುವ ಕೆಜಿಐಡಿ, ಜಿಪಿಎಫ್, ಜ್ಯೋತಿ ಸಂಜೀವಿನಿ ಸೌಲಭ್ಯ. 2. 20-25 ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು. 3. ಗುತ್ತಿಗೆ ಪದ್ಧತಿ ಕೈಬಿಟ್ಟು ವಾಟರ್ವುನ್, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕರು, ಕಾರ್ವಿುಕರು, ಲೋಟರ್ಗಳನ್ನು ಖಾಯಂಗೊಳಿಸಬೇಕು.