ತಾಂತ್ರಿಕ ಹೊರೆ ಸಡಿಲಿಕೆಗೆ ಅನಿರ್ದಿಷ್ಟಾವಧಿ ಮುಷ್ಕರ

Published on

ವಿವಿಧ ಬೇಡಿಕೆ ಈಡೇರಿಕೆಗೆ ಗ್ರಾಮಾಡಳಿತಾಧಿಕಾರಿಗಳು ಪಟ್ಟು ಮೂಲ ಸೌಕರ್ಯ ಅನಿವಾರ್ಯ

ದೇವನಹಳ್ಳಿ ಪಟ್ಟಣದ ಆಡಳಿತಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಯ ಎದುರು ತಾಲೂಕು ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಯಿತು. ಸರ್ಕಾರಿ ನೌಕರರರ ಸಂಘದ ಜಿಲ್ಲಾ ಪ್ರಧಾನ ಕಾರ್ಯರ್ಶಿ ಗಂಗಾಧರ್, ಕಂದಾಯ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುದೀಪ್, ಮಹೇಶ್, ಸರ್ಕಾರಿ ನೌಕರರ ಸಂಘದ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಚೈತ್ರಾ ಇದ್ದರು.
ದೇವನಹಳ್ಳಿ ಪಟ್ಟಣದ ಆಡಳಿತಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಯ ಎದುರು ತಾಲೂಕು ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಯಿತು. ಸರ್ಕಾರಿ ನೌಕರರರ ಸಂಘದ ಜಿಲ್ಲಾ ಪ್ರಧಾನ ಕಾರ್ಯರ್ಶಿ ಗಂಗಾಧರ್, ಕಂದಾಯ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುದೀಪ್, ಮಹೇಶ್, ಸರ್ಕಾರಿ ನೌಕರರ ಸಂಘದ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಚೈತ್ರಾ ಇದ್ದರು.

ದೇವನಹಳ್ಳಿ: ಪಟ್ಟಣದ ಆಡಳಿತ ಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಮೂರ್ತಿ ಎದುರು ತಾಲೂಕು ಕಂದಾಯ ಇಲಾಖೆಯ ಅಧಿಕಾರಿಗಳು, ರಾಜ್ಯ ಸಂಘದ ಕಾರ್ಯಕಾರಿಣಿ
ನಿರ್ಣಯದಂತೆ ಗ್ರಾಮಾಡಳಿತಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಗುರುವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ಕಂದಾಯ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವಿ.ಶ್ರೀನಿವಾಸ್ ಮಾತನಾಡಿ, ತಾಲೂಕುಮಟ್ಟದಲ್ಲಿ ಮೌನ ಪ್ರತಿಭಟನೆಯ ಮೂಲಕ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ಮಾಡಲಾಗುತ್ತಿದೆ. ಯೋಜನೆಗಳನ್ನು ಕಂಪ್ಯೂಟರ್, ಹೊಸ ಆ್ಯಪ್ ತಾಂತ್ರಿಕತೆ ಬಳಸಿ ರೂಪಿಸುವುದರಿಂದ ಅಧಿಕಾರಗಳ
ಮೇಲೆ ಒತ್ತಡ ಹೆಚ್ಚುತ್ತಿದೆ, ತಾಂತ್ರಿಕ ಕೆಲಸಗಳಿಗೆ ಅವಶ್ಯವಾದ ಸೌಕರ್ಯ, ತರಬೇತಿ ಒದಗಿಸಬೇಕು ಎಂದು ಒತ್ತಾಯಿಸಿದರು.
ಬೆಳೆ ಸಮೀಕ್ಷೆ, ಕೃಷಿ ಗಣತಿ, ನೀರಾವರಿ ಗಣತಿ, ದಿಶಾಂಕ್, ವೋಟರ್ ಹೆಲ್ಪ್‌ಲೈನ್, ಪೌತಿ ಆಂದೋಲನ ಆ್ಯಪ್, ಸಿ-ವಿಜಿಲ್ ಆ್ಯಪ್, ಇ-ಆಫೀಸ್, ಹಕ್ಕುಪತ್ರ, ಆಧಾರ್ ಸೀಡ್ ಸೇರಿ ಇನ್ನಿತರ ಸೇವೆಗಳನ್ನು ಸ್ಥಗಿತಗೊಳಿಸಿ ರಾಜ್ಯದ ಎಲ್ಲ ತಾಲೂಕು ಕಚೇರಿಗಳ ಮುಂದೆ ಮುಷ್ಕರ ಹೂಡಲು ತೀರ್ಮಾನಿಸಿದ್ದಾರೆ. ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ರಾಜ್ಯವ್ಯಾಪಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದರು.

ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೆ ಆಗಿರುವ ಎಲ್ಲ ಅಮಾನತ್ತುಗಳನ್ನು ರದ್ದುಪಡಿಸಿ ಹಿಂಪಡೆಯುವುದು, ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ಒದಗಿಸುವುದು ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ. ಇಂದಿನ ಮುಷ್ಕರಕ್ಕೆ ಸ್ಪಂದಿಸದೆ ಹೋದರೆ ನಾಳೆ ಜಿಲ್ಲಾಡಳಿತ ಭವನದ ಮುಂದೆ ಜಿಲ್ಲಾಮಟ್ಟದಲ್ಲಿ ಮುಷ್ಕರ ನಡೆಸಲಾಗುವುದು. ಸರ್ಕಾರ ಅದಕ್ಕೂ ಮಣಿಯದೆ ಹೋದರೆ ಸೋಮವಾರದಿಂದ ರಾಜ್ಯದ ಎಲ್ಲ ವಿಎಗಳು ಸೇರಿ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ.
ರಂಗನಾಥ
ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ

ರಾಜ್ಯಾದ್ಯಂತ ಮುಷ್ಕರ ನಡೆಯುತ್ತಿದ್ದು, ನಮ್ಮ ಕೆಲಸಗಳನ್ನು ಮೊಬೈಲ್ ಆ್ಯಪ್ ಮುಖಾಂತರ ಮಾಡಬೇಕಾಗಿದೆ. ಆದರೆ, ಯಾವುದೇ ಸೌಲಭ್ಯ ನೀಡದೆ ನೂರರಷ್ಟು ಫಲಿತಾಂಶ ಬಯಸುವ ಒತ್ತಡ ಮೇಲಧಿಕಾರಿಗಳಿಂದ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ಮುಷ್ಕರ ಮುಂದುವರಿಯುತ್ತದೆ.
ಶೈಲಜಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಉಪಾಧ್ಯಕ್ಷೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net