ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸ್ವಾತಂತ್ರೋತ್ಸವ

15adarshkdga3
Published on

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ೭೭ನೇ ಸ್ವಾತಂತ್ರೋತ್ಸವವನ್ನು ಮಂಗಳವಾರ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ॥ ಕೆ.ಬಿ.ಕಾರ್ಯಪ್ಪರವರು ದ್ವಜಾರೋಹಣ ನೆರೆವೇರಿಸಿ ಮಾತನಾಡಿ, ದೇಶಕ್ಕಾಗಿ ಮಡಿದ ವೀರರನ್ನು ಸ್ಮರಿಸುವ ಕಾರ್ಯವನ್ನು ಸಂಸ್ಥೆ ಮಾಡುತ್ತಿದೆ. ಈ ಸಂಸ್ಥೆಯಿಂದ ವೈದ್ಯರಾಗಿ ಹೊರಹೊಮ್ಮುವ ವೈದ್ಯರೆಲ್ಲರೂ ಸಂಸ್ಥೆಯ ಕೀರ್ತಿಯನ್ನು ಎತ್ತಿ ಹಿಡಿಯುವಂತಗಾಬೇಕು. ಜನರಿಗೆ ಸೇವೆ ನೀಡುವಂತಾರಬೇಕೆಂದು ತಿಳಿಸಿದರು.


ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿಗಳಾದ ಎಸ್.ಎಲ್.ಸ್ವಾಮಿ, ನರ್ಸಿಂಗ್ ಪ್ರಾಂಶುಪಾಲ ಮಂಜುಳ ಸೇರಿದಂತೆ ಇತರರು ಹಾಜರಿದ್ದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ದೇಶಭಕ್ತಿ ಗಾಯನ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ವೈದ್ಯರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಎಂಬಿಬಿಎಸ್, ಸ್ನಾತಕೋತ್ತರ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net