ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಶಾರದಾವಿಲಾಸ ವಿದ್ಯಾಸಂಸ್ಥೆಯಿಂದ ಜಾಥಾ

Sharada vilasa
Published on

ಮೈಸೂರು: ಸ್ವಾತಂತ್ರೊೃೀತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಕೃಷ್ಣಮೂರ್ತಿಪುರಂನ ಶಾರದಾವಿಲಾಸ ವಿದ್ಯಾಸಂಸ್ಥೆ ವತಿಯಿಂದ ನಗರದ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬುಧವಾರ ‘ನಮ್ಮ ನಡಿಗೆ ರಾಷ್ಟ್ರೈಕ್ಯತೆದೆಡೆಗೆ’ ಜಾಥಾ ನಡೆಯಿತು.

ಜಾಥಾಗೆ ಚಾಲನೆ ನೀಡಿದ ಮೇಯರ್ ಸುನಂದಾ ಪಾಲನೇತ್ರ ಮಾತನಾಡಿ, ದೇಶ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮ ಕ್ಷಣದಲ್ಲಿ ಇದೆ. ಈ ಸಂದರ್ಭದಲ್ಲಿ ಯುವ ಜನರು ದೇಶಭಕ್ತಿ ಮೈಗೂಡಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನಮ್ಮ ದೇಶವನ್ನು ಪ್ರಗತಿ ಪಥದೆಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಯುವಜನರು ಚಿಂತನೆ ನಡೆಸಬೇಕು. ದೇಶ ಅಭಿವೃದ್ಧಿ ಹೊಂದಿ ದರೆ ದೇಶದ ಜನರು ಸಹ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಶಾರದವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಬಿ.ಎಂ.ಸುಬ್ರಾಯ ಮಾತನಾಡಿ, ಹಲವು ಸ್ವಾತಂತ್ರೃ ಹೋರಾಟಗಾರರ ತ್ಯಾಗ, ಬಲಿದಾ ನದಿಂದ ದೇಶಕ್ಕೆ ಸ್ವಾತಂತ್ರೃ ಲಭಿಸಿದೆ. ಸ್ವಾತಂತ್ರೃಕ್ಕಾಗಿ ಹೋರಾಡಿದ ಮಹನೀಯರನ್ನು ನಾವೆಂದಿಗೂ ಮರೆಯಬಾರದು. ಯುವಜನರು ಒಟ್ಟಾಗಿ ದೇಶವನ್ನು ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನಗರ ಪಾಲಿಕೆ ಸದಸ್ಯೆ ಡಾ.ಜಿ. ರೂಪ, ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್, ಸದಸ್ಯರಾದ ಆರ್. ನರಸಿಂಹ, ಎಸ್.ಎಲ್. ರಾಮಚಂದ್ರ, ಶಾರದ ವಿಲಾಸ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ದೇವಿಕಾ, ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಹನುಮಂತಾಚಾರ ಜೋಷಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ಕೆ.ಅಶೋಕ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net