ವಿಶ್ವಮಾನವ ಉದ್ಯಾನದಲ್ಲಿ ಸ್ವಾತಂತ್ರೋತ್ಸವ

15adarshkdga4
Published on

ಮಡಿಕೇರಿ: ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ ೭೭ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.


ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಪ್ರಭು ರೈರವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟದ ಬಗ್ಗೆ ಮಾತನಾಡಿದರು. ವೇದಿಕೆಯ ವತಿಯಿಂದ ಮಂಗೇರಿರ ಮುತ್ತಣ್ಣ ವೃತ್ತದಲ್ಲಿ ಶಾಲಾ ಮಕ್ಕಳು ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿ ವಿತರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ವೇದಿಕೆ ಅಧ್ಯಕ್ಷ ರವಿಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್, ಮಡಿಕೇರಿ ತಾಲೂಕು ಅಧ್ಯಕ್ಷ ನಾಗೇಶ್, ಮಡಿಕೇರಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷ ಕವಿತಾ ಪ್ರಸಾದ್, ಮಡಿಕೇರಿ ತಾಲೂಕು ಕಾರ್ಯದರ್ಶಿಗಳಾದ ಅಕ್ಷಿತ್, ನಗರ ಕಾರ್ಯದರ್ಶಿ ಪೂರ್ಣಿಮಾ, ನಗರ ಅಧ್ಯಕ್ಷ ಭರತ್, ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net