

ವಿಜಯವಾಣಿ ಸುದ್ದಿಜಾಲ ಗುರುಪುರ
ಸ್ವಾತಂತ್ರ್ಯೋತ್ಸವದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳ ಅಗತ್ಯವಿದೆ. ಪ್ರಾಥಮಿಕ ಶಾಲಾ ದಿನಗಳಿಂದಲೇ ಮಕ್ಕಳಲ್ಲಿ ಸ್ವಚ್ಛತೆ ಮತ್ತು ಪರಿಸರದ ಮೇಲಿನ ಕಾಳಜಿ ಬೆಳೆಯಬೇಕು. ಇಂತಹ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ ಹೇಳಿದರು.
ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಗಂಜಿಮಠ ಗ್ರಾಪಂ ಆಶ್ರಯದಲ್ಲಿ ಗಂಜಿಮಠ ವ್ಯಾಪ್ತಿಯ ಅಂಗನವಾಡಿಯಿಂದ ಪ್ರೌಢಶಾಲಾ ಎಸ್ಸೆಸ್ಸೆಲ್ಸಿ ಶಾಲಾ ವಿದ್ಯಾರ್ಥಿಗಳಿಗೆ ಬುಧವಾರ ಗಂಜಿಮಠದ ಖಾಸಗಿ ಸಭಾಗೃಹದಲ್ಲಿ ಏರ್ಪಡಿಸಿದ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಶಿಕ್ಷಕಿ ಶಾಲಿನಿ ಕಾರ್ಯಕ್ರಮ ಉದ್ಘಾಟಿಸಿದರು. ಗಂಜಿಮಠ ಗ್ರಾಪಂ ಅಧ್ಯಕ್ಷೆ ಮಾಲತಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕಿ ಸುಶೀಲಾ ಮಳಲಿ ಹಾಗೂ ಗುರುಪುರ ಹೋಬಳಿ ನಿವೃತ್ತ ಗ್ರಾಮ ಸಹಾಯಕ ಶಿವರಾಮ ಕೊಟ್ಟಾರಿ ಅವರನ್ನು ಸನ್ಮಾನಿಸಲಾಯಿತು.
ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಬೂಬ ಪೂಜಾರಿ, ಪಂಚಾಯಿತಿ ಉಪಾಧ್ಯಕ್ಷೆ ಸಾರಮ್ಮ, ಸದಸ್ಯರಾದ ಸುನೀಲ್ ಜಿ., ಪ್ರವೀಣ್ ಶೆಟ್ಟಿ, ಸುನೀಲ್ ಫರ್ನಾಂಡಿಸ್, ಜಯಾನಂದ ಕುಲಾಲ್, ವಿನಯ್ ರೈ, ಅನಿತಾ ಡಿಸೋಜ, ತಮ್ಮಯ್ಯ ಪೂಜಾರಿ, ಸಾದಿಕ್, ಅಬ್ದುಲ್ ಹಮೀದ್, ರೇಖಾ, ಸೌಮ್ಯಾ, ರೋಹಿತಾಕ್ಷಿ, ಫರ್ಜಾನಾ, ವಿಜಯ್, ಪಂಚಾಯಿತಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಮೊಹಮ್ಮದ್ ಶರೀಫ್, ಉದ್ಯಮಿಗಳಾದ ಚಂದ್ರಹಾಸ ಶೆಟ್ಟಿ ನಾರಳ, ಅಬ್ದುಲ್ ಖಾದರ್, ಶಿವಾನಂದ ಬಂಗೇರ, ಅಶಿತ್ ಲೋಬೊ, ಗ್ರಾಮಾಡಳಿತಾಧಿಕಾರಿ ಮೆಹಬೂಬ್, ಶಿಕ್ಷಕಿ ವಾರಿಜಾ, ಶಾಲಾ ಶಿಕ್ಷಕಿಯರು, ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಗಂಜಿಮಠ ಗ್ರಾಪಂ ಪಿಡಿಒ ಪ್ರಕಾಶ್ ಸ್ವಾಗತಿಸಿದರು. ಉಮೇಶ್ ಮಳಲಿ ಕಾರ್ಯಕ್ರಮ ನಿರೂಪಿಸಿದರು. 12 ಶಾಲೆಯ ಸುಮಾರು 350 ಮಕ್ಕಳು ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.