ಆಳ್ವಾಸ್‌ನಲ್ಲಿ 15 ಸಾವಿರಕ್ಕೂ ಅಧಿಕ ಮಂದಿ ಭಾಗಿ

New Project (36)
Published on

ಮೂಡುಬಿದಿರೆ: ಇಂದಿನ ಪೀಳಿಗೆಗೆ ಸ್ವಾತಂತ್ರ್ಯ ವೆಂದರೆ ಏನನ್ನಾದರೂ ಸಾಧಿಸುವ ಅವಕಾಶ ಎಂದು ಭಾಸವಾಗಬಹುದು. ಆದರೆ ನಮ್ಮ ಹಿರಿಯರು ಸರಿಯಾದ ಶಿಕ್ಷಣ ವೈದ್ಯಕೀಯ ಸೌಲಭ್ಯ ಮತ್ತು ಇನ್ನಿತರ ಮೂಲ ಸೌಕರ್ಯಗಳಿಲ್ಲದೆ ಬದುಕಿದ್ದರು. ನಿಜವಾದ ಸ್ವಾತಂತ್ರ್ಯ ಅಭಿವೃದ್ಧಿ ಪ್ರತಿಯೊಬ್ಬರಿಗೂ ತಲುಪಿದಾಗ ಹಾಗೂ ಪ್ರತಿಯೊಬ್ಬರೂ ಈ ಅಗತ್ಯ ಸೌಲಭ್ಯ ಪಡೆದಾಗ ಸಾಧ್ಯವಾಗುವುದು ಎಂದು ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಲೆ.ಜನರಲ್ ಅರುಣ್ ಅನಂತನಾರಾಯಣ್ ಹೇಳಿದರು.

ವಿದ್ಯಾಗಿರಿಯ ಕೆ.ವಿ.ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣಗೈದು ಮಾತನಾಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಶಾಸಕ ಉಮಾನಾಥ ಕೋಟ್ಯಾನ್, ಸಂಸ್ಥೆಯ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ.ವಿನಯ ಆಳ್ವ, ಡಾ.ಗ್ರೀಷ್ಮಾ, ಡಾ.ಹನಾ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಉಪನ್ಯಾಸಕ ರಾಜೇಶ್ ಡಿಸೋಜ ಹಾಗೂ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.

ಮಳೆಯಲ್ಲೇ ರಾಷ್ಟ್ರಭಕ್ತಿಯ ಸಿಂಚನ

ಎನ್‌ಸಿಸಿ ಕೆಡೆಟ್ ಸೀನಿಯರ್ ಅಂಡರ್ ಆಫೀಸರ್ ಅರ್ಚನಾ ನಾಗರಾಜ್ ಅವರಿಂದ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಎನ್‌ಸಿಸಿ ಜೂನಿಯರ್ ಅಂಡರ್ ಆಫೀಸರ್‌ಗಳಾದ ಸಂಜುಶ್ರೀ, ಗೀತಾ, ನಯನಾ ಹಾಗೂ ರಾಣಿ ಅತಿಥಿಗಳನ್ನು ವೇದಿಕೆಗೆ ಕರೆತಂದರು. ಪರೇಡ್ ಕಮಾಂಡರ್ ಭರತ್ ಗೌಡ ಅವರಿಂದ ವರದಿ ಪಡೆದು ಧ್ವಜಾರೋಹಣ ಮಾಡಲಾಯಿತು. ಅಜಯ್ ವಾರಿಯರ್ ತಂಡದಿಂದ ಸಂಗೀತ ರಸಮಂಜರಿ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net