ಹಳೆಯಂಗಡಿ ಪಂಚಾಯಿತಿಯಲ್ಲಿ ಸಾಧಕರಿಗೆ ಸನ್ಮಾನ

New Project (40)
Published on

ಹಳೆಯಂಗಡಿ: ಯುವ ಜನತೆ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುಂದುವರಿಯಲು ಸಹಕಾರ ನೀಡುವ ಜತೆಗೆ ಸಮಾಜಮುಖಿಯಾಗಿ ದೀನ ದುರ್ಬಲರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದು ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ಹೇಳಿದರು.

ಹಳೆಯಂಗಡಿ ಗ್ರಾಪಂಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗ್ರಾಪಂ ವ್ಯಾಪ್ತಿಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ಡಾ.ಯತೀಶ್ ಸಸಿಹಿತ್ಲು, ಸುಮನ್ ಸುವರ್ಣ ಸಸಿಹಿತ್ಲು, ಡಾ.ಕೃತಿ, ಸಮಾಜ ಸೇವಕರಾದ ತುಕಾರಾಮ ಹಳೆಯಂಗಡಿ, ಬಶೀರ್, ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ಸುಜಾತಾ ಇಂದಿರಾನಗರ, ಆಶಾ ಕಾರ್ಯಕರ್ತೆ ಸುಶೀಲಾ ಅವರನ್ನು ಸನ್ಮಾನಿಸಲಾಯಿತು.

ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಗ್ರಂಥ ಪಾಲಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net