ರಾಜೀವ್‌ಗಾಂಧಿ ಎದೆ ರೋಗಗಳ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನ ಅರ್ಥಪೂರ್ಣ ಆಚರಣೆ

Rajivegandhi hosptial - 1
Published on

ಬೆಂಗಳೂರು: ನಗರದ ಎಸ್‌ಡಿಎಸ್ ಟಿಆರ್‌ಎಸ್ ಮತ್ತು ರಾಜೀವ್‌ಗಾಂಧಿ ಎದೆ ರೋಗಗಳ ಸಂಸ್ಥೆಯ ಆವರಣದಲ್ಲಿ ಗುರುವಾರ ಸಂಭ್ರಮದಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯಿಂದ ಹೊರಟು ನಿಮ್ಹಾನ್ಸ್ ಆವರಣದಲ್ಲಿ ನಡೆದ ಜಾಥಾದಲ್ಲಿ ಆಸ್ಪತ್ರೆಯ ವೈದ್ಯರು, ಶುಶ್ರೂಷಕರು ಸೇರಿ ಎಲ್ಲ ವಲಯದ ಸಿಬ್ಬಂದಿ ಭಾಗವಹಿಸಿದ್ದರು. ಬಳಿಕ ಸಂಸ್ಥೆಯ ನಿರ್ದೇಶಕ ಡಾ. ಸಿ. ನಾಗರಾಜ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ ಸ್ವಾಂತ್ರ್ಯೋತ್ಸವದ ಶುಭ ಕೋರಿದರು. ಇದೇ ವೇಳೆ ದೇಶಕ್ಕಾಗಿ ಹುತಾತ್ಮರಾದ ವೀರ ನಾಯಕರನ್ನು ಸ್ಮರಿಸಿದರು. ಅವರು ಈ ದೇಶಕ್ಕೆ ತಂದು ಕೊಟ್ಟಿರುವ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದು ಹೇಳಿದರು.

ಇದೇ ವೇಳೆ ಆಸ್ಪತ್ರೆ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಸ್ಪತ್ರೆ ವೈದ್ಯರು ಸೇರಿ ಎಲ್ಲ ವಲಯದ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಕ್ರೀಡಾ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆ, ರಂಗೋಲಿ ಸ್ಪರ್ಧೆ ಸೇರಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಸಿ ಸೋಮಶೇಖರ್ ಬಹುಮಾನ ವಿತರಿಸಿದರು.

ಉದ್ಯಮಿ ಜಿ.ಎಂ. ಬಾಬು, ಅಖಿಲ ಭಾರತ ಸಾರ್ವಜನಿಕ ಸಂಪರ್ಕ ಮಂಡಳಿ ಅಧ್ಯಕ್ಷ ಡಾ. ಎಂ.ಬಿ. ಜಯರಾಮ್, ಡಾ. ಜಿ.ಟಿ. ಸುಭಾಷ್, ಸಿದ್ದಲಿಂಗಸ್ವಾಮಿ ಇತರರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net