

ಬಂಟ್ವಾಳ: ನಾವೆಲ್ಲರೂ ಪರಿಸರದ ಸ್ವಚ್ಛತೆ ಕಾಪಾಡುವ ಸಂಕಲ್ಪ ಕೈಗೊಳ್ಳಬೇಕು ಎಂದು ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷ ಸುರೇಶ್ ಬಂಗೇರ ಹೇಳಿದರು.
ಸಂಚಯಗಿರಿಯಲ್ಲಿರುವ ನಾಗರಿಕ ಕ್ರಿಯಾ ಸಮಿತಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ಸಾಲ್ಯಾನ್ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಪ್ರಮುಖರಾದ ನರಸಿಂಹ ರಾಜ ಹೊಳ್ಳ, ಹರೀಶ್ ಶೆಣೈ ತಾಯಮ್ಮ, ಎ.ದಾಮೋದರ್ ಸಂಚಯಗಿರಿ, ಧನಂಜಯ ಬಾಳಿಗ ಮತ್ತಿತರರು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.