ತರಳಬಾಳು ಕ್ಯಾಂಪಸ್ ನಲ್ಲಿ ಸ್ವಾತಂತ್ರ್ಯೋತ್ಸವ,  ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ

IMG-20250817-WA0005-1.jpg
Published on

ಹುಬ್ಬಳ್ಳಿ: ಇಲ್ಲಿಯ ಉಣಕಲ್ಲ ತರಳಬಾಳು ಕ್ಯಾಂಪಸ್ ನಲ್ಲಿ ತರಳಬಾಳು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಆರ್.ಕೆ. ಕೋಕಾಟಿ ಪ್ರೌಢಶಾಲೆ, ಐ.ಜಿ. ಹಿರೇಗೌಡರ ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.

ಪ್ರಾಥಮಿಕ ಶಾಲೆಯ ಸ್ಥಳಿಯ ಸಲಹಾ ಸಮಿತಿ ಅಧ್ಯಕ್ಷ ಆರ್.ಎಸ್. ಹನ್ನಿ ಧ್ವಜಾರೋಹಣ ನೆರವೇರಿಸಿದರು.

ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಸ್ಥಳಿಯ ಸಲಹಾ ಸಮಿತಿ ಅಧ್ಯಕ್ಷ ಶಿವಾನಂದ ಹೆಬಸೂರ ಅವರು ನಗದು ಬಹುಮಾನ ವಿತರಿಸಿದರು. ಪ್ರೌಢಶಾಲೆ ಸ್ಥಳಿಯ ಸಲಹಾ ಸಮಿತಿ ಅಧ್ಯಕ್ಷ ಆರ್.ವಿ. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳು ಭಾಷಣ, ದೇಶಭಕ್ತೀಗಿತೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಧರಿಸಿ ಸಂಭ್ರಮಿಸಿದರು.

ಮುಖ್ಯೋಪಾಧ್ಯಾಯ ಶಿವಕುಮಾರಗೌಡ ಬಿ.ಜಿ, ಪ್ರಾಚಾರ್ಯ ಮೇಘಾ ಎಂ.ಜೆ. ಉಪಸ್ಥಿತರಿದ್ದರು. ಉಪನ್ಯಾಸಕ ವೀರೇಶ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು. ಗಣೇಶ ಮಾಂಡೇಕರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net