

ಕಾರ್ಕಳ: ಸ್ವಾತಂತ್ರ್ಯ ಎಂದರೆ ಕೇವಲ ಬೇಡಿಗಳಿಂದ ಮುಕ್ತವಾಗುವುದು ಮಾತ್ರವಲ್ಲ, ಅದು ಜವಾಬ್ದಾರಿಯ ಪ್ರತೀಕವಾಗಿದೆ. ನಾವು ಪ್ರತಿಯೊಬ್ಬರೂ ದೇಶವನ್ನು ಪ್ರಗತಿಯ ಮಾರ್ಗದಲ್ಲಿ ಕೊಂಡೊಯ್ಯುವ ಸೇನಾನಿಗಳಾಗಬೇಕು ಎಂದು ಭಾರತೀಯ ವಾಯುಸೇನೆಯ ಮಾಜಿ ಯೋಧ ಡಾ.ನವೀನ್ ಅಮಾನ್ನ ಹೇಳಿದರು.
ಕಾರ್ಕಳ್ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ಯಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಹತ್ತನೇ ತರಗತಿಯ ಶೆಹ್ನುಮ್ ಫಾತಿಮಾ, ಪ್ರಥಮ ವಿಜ್ಞಾನ ವಿಭಾಗದ ಬ್ರೋವಿನ್ ಅಗೇರ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ಪ್ರಾಥಮಿಕ ಶಾಲಾ ವಿಭಾಗದ ಮಕ್ಕಳಿಂದ ದೇಶ ಭಕ್ತಿಗೀತೆ ಗಾಯನ ನಡೆಯಿತು. ಪದವಿಪೂರ್ವ ವಿಭಾಗದ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಂಶುಪಾಲ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಜೋತ್ಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರೌಢಶಾಲಾ ಶಿಕ್ಷಕಿ ಸ್ವಾತಿ ಶೆಟ್ಟಿ ಸ್ವಾಗತಿಸಿದರು. ಪದವಿಪೂರ್ವ ವಿಭಾಗದ ಆಂಗ್ಲಭಾಷಾ ಉಪನ್ಯಾಸಕಿ ಶಿಜಿ ಸಿ.ಕೆ. ವಂದಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿ ಜೆಸ್ಲಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.