ಗುಂಡ್ಮಿ-ಸಾಸ್ತಾನ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರೋತ್ಸವ

kota (2)
Published on

ಕೋಟ: ಗುಂಡ್ಮಿ-ಸಾಸ್ತಾನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣವನ್ನು ಸಾಲಿಗ್ರಾಮ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಸುಲತಾ ಹೆಗ್ಡೆ ನೆರವೇರಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಜಾತಾ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಪಿತ ಮಹಾತ್ಮ ಗಾಂಧಿ, ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಸುಜಯ್ ಮತ್ತು ಧನುಷ್‌ಗೆ ಬಹುಮಾನ ವಿತರಿಸಲಾಯಿತು.

ಕಲಿಕೆಯಲ್ಲಿ ಮುಂದಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಾಸ್ತಾನ ಕೆನರಾ ಬ್ಯಾಂಕ್ ನೀಡಿದ ವಿದ್ಯಾರ್ಥಿ ವೇತನವನ್ನು ನೀಡಲಾಯಿತು. ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ರಾಘವೇಂದ್ರ ಜಿ., ಸದಸ್ಯರಾದ ರವಿ., ಸಂಧ್ಯಾರಾವ್, ವಿದ್ಯಾಭಿಮಾನಿಗಳು, ಪಾಲಕರು ಉಪಸ್ಥಿತರಿದ್ದರು. ಸಹಶಿಕ್ಷಕರಾದ ಶ್ರೀಧರ ಶಾಸ್ತ್ರಿ ನಿರೂಪಿಸಿದರು. ಮುಖ್ಯಶಿಕ್ಷಕ ಸತೀಶ ಐತಾಳ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಅಕ್ಷಯಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net