ಗಂಗೊಳ್ಳಿಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

gan
Published on

ಕುಂದಾಪುರ: ಗಂಗೊಳ್ಳಿ ಮೇಲ್‌ಗಂಗೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ(ಹವೇ) ಶಾಲೆಯಲ್ಲಿ 79ನೇ ಸ್ವಾತಂತ್ರೃ ದಿನವನ್ನು ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು.

ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೃದಿನಾಚರಣೆ ಸಂದೇಶ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ ಖಾರ್ವಿ, ಗ್ರಾಪಂ ಸದಸ್ಯರಾದ ರಾಜೇಂದ್ರ ಶೇರುಗಾರ್, ಚಂದ್ರ ಖಾರ್ವಿ, ಅಶ್ವಿನಿ ಖಾರ್ವಿ, ಡಾ.ಅಂಬೇಡ್ಕರ್ ಯುವಕ ಮಂಡಲ ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ., ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ನಾಗಲಕ್ಷ್ಮೀ, ವಕೀಲ ಆನಂದ, ಅಂಬೇಡ್ಕರ್ ಸೇನೆ ಉಡುಪಿ ಜಿಲ್ಲೆ ಅಧ್ಯಕ್ಷ ಸತೀಶ ಕಂಚುಗೋಡು, ವರದಿಗಾರ ದಾಮೋದರ, ಅಂಗನವಾಡಿ ಕಾರ್ಯಕರ್ತೆ ಸಹನಾ, ಮುಖ್ಯಶಿಕ್ಷಕ ಗುರುರಾಜ್ ಆಚಾರಿ, ಎಸ್‌ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಮತ್ತಿತರರು ಉಪಸ್ಥಿತರಿದ್ದರು.ದಾನಿಗಳಾದ ಗ್ರಾಪಂ ಸದಸ್ಯ ರಾಜೇಂದ್ರ ಶೇರುಗಾರ್ ನೀಡಿದ ಟ್ರಾೃಕ್ ಸೂಟ್, ಸತೀಶ ಕಂಚುಗೋಡು ಮತ್ತು ಬಳಗದವರು ನೀಡಿದ ಲೇಖನ ಸಾಮಾಗ್ರಿ ಮಕ್ಕಳಿಗೆ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net