ಕಂಡಕರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

15adarshkdga1
Published on

ಮಡಿಕೇರಿ: ಎಲ್ಲಾ ಜಾತಿ, ಧರ್ಮದವರು ಒಂದಾಗಿ ಒಗ್ಗಟ್ಟಾಗಿ ಜೀವನ ನಡೆಸಬೇಕೆಂದು ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಸಿಂಧು ಹೇಳಿದರು.


ಚೆಟ್ಟಳ್ಳಿ ಸಮೀಪದ ಕಂಡಕರೆ ಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮಿಯ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಕಂಡಕರೆಯಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಚೆಟ್ಟಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಕೆ.ಸಿಂಧು ಮಾತಾನಾಡಿದರು.


ಭಾರತ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಚಿಕ್ಕ ವಯಸ್ಸಿನಿಂದಲೇ ಎಲ್ಲರೂ ದೇಶಪ್ರೇಮ ಬೆಳೆಸಬೇಕಾಗಿದೆ. ಗಾಂಧಿ ಯುವಕ ಸಂಘದಿಂದ ಇದೇ ವರ್ಷ ನಡೆಯಲಿರುವ ಸರ್ವಧರ್ಮೀಯ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದೆಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಕೆ.ಸಿಂಧು ಭರವಸೆ ನೀಡಿದರು.


ಗ್ರಾಮ ಪಂಚಾಯಿತಿ ಸದಸ್ಯ ಸಿ.ಇ.ತೀರ್ಥಕುಮಾರ್ ಮಾತನಾಡಿ, ಸ್ವಾತಂತ್ರ್ಯ ಹೋರಾಡಿದ ಹೋರಾಟಗಾರರ ತ್ಯಾಗವನ್ನು ನಾವು ಸದಾ ನೆನಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.


ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಕಂಡಕರೆ ವಾರ್ಡ್ ಸದಸ್ಯೆ ಕೆ.ಸಿಂಧುರವರನ್ನು ಗಾಂಧಿ ಯುವಕ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಎಂ.ಷರೀಫ್, ಗುತ್ತಿಗೆದಾರರಾದ ಸಿ.ಕೆ.ಶಂಶುದ್ದೀನ್, ಕೆ.ಎಂ.ಮೊಹಮ್ಮದ್, ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ, ಉಪಾಧ್ಯಕ್ಷ ಸವಾದ್ ಉಸ್ಮಾನ್, ಕಾರ್ಯದರ್ಶಿ ಕೆ.ಎಂ.ಇರ್ಷಾದ್, ಪಿ.ಎಂ.ಅಜಿನಾನ್, ಕೆ.ಎಂ.ಉನೈಸ್, ಕೆ.ಜೆ.ಶಿಬಿಲ್, ಇಮ್ರಾನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net