ಶನಿವಾರಸಂತೆ ವಿವಿಧೆಡೆ ಸ್ವಾತಂತ್ರೃ ದಿನಾಚರಣೆ

15ss2mulluru scl samskrutika
Published on

ಶನಿವಾರಸಂತೆ: ಶನಿವಾರಸಂತೆ ವಿವಿದೆಢೆಯಲ್ಲಿ 78ನೇ ಸ್ವಾತಂತ್ರೃ ದಿನವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.


ಪಟ್ಟಣದ ವಿವಿಧ ಶಾಲಾ-ಕಾಲೇಜು, ಸಂಘ-ಸಂಸ್ಥೆಗಳು, ನಿವೃತ್ತ ಸೈನಿಕರ ಸಂಘ, ಆಟೋ ಚಾಲಕರ ಸಂಘ ವತಿಯಿಂದ ಸ್ವಾತಂತ್ರೃ ದಿನ ಆಚರಿಸಿದರು.


ಪಟ್ಟಣದ ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಹಳೆಯ ವಿದ್ಯಾರ್ಥಿ ಮತ್ತು ಭಾರತೀಯ ವಾಯುಸೇನೆಯ ಅಧಿಕಾರಿ ಸಿ.ಎನ್.ಚಂಗಪ್ಪ ಧ್ವಜಾರೋಹಣ ನೆರವೇರಿಸಿದರು. ನಂತರ ಸ್ವಾತಂತ್ರೃ ದಿನದ ಮಹತ್ವ ಕುರಿತು ಮಾತನಾಡಿದರು.


ವಿದ್ಯಾಸಂಸ್ಥೆ ಪ್ರಾಂಶುಪಾಲ ಸೆಬಾಸ್ಟಿನ್ ಮೈಕಲ್ ಅಧ್ಯಕ್ಷತೆ ವಹಿಸಿದ್ದರು. ಸ್ವಾತಂತ್ರೃ ದಿನದ ಕಾರ್ಯಕ್ರಮದ ಅಂಗವಾಗಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಮೂಕಾಭಿನಯ, ಸಾಮೂಹಿಕ ಗಾಯನ ಮುಂತಾದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.


ಸುಪ್ರಜ ಶಾಲೆ: ಪಟ್ಟಣದ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ 76ನೇ ಸ್ವಾತಂತ್ರೃ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಗೌಡಳ್ಳಿಯ ಶಿಲ್ಪಿ ಮುಂಜುನಾಥ ಆಚಾರ್ಯ ಧ್ವಜಾರೋಹಣ ನೆರವೇರಿಸಿದರು. ವಿದ್ಯಾಸಂಸ್ಥೆ ಪ್ರಾಂಶುಪಾಲೆ ಡಿ.ಸುಜಲಾದೇವಿ ಅಧ್ಯಕ್ಷತೆ ವಹಿಸಿದರು. ದಿನದ ಅಂಗವಾಗಿ ವಿದ್ಯಾರ್ಥಿಗಳಿಂದ ಭಾಷಣ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಮುಳ್ಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿ ಆಚರಣೆ: ಸಮೀಪದ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ನಿಡ್ತ ಗ್ರಾಪಂ ಮಾಜಿ ಅಧ್ಯಕ್ಷ ತೀರ್ಥಾನಂದ್ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಪಂಕಜಾ ಅಧ್ಯಕ್ಷತೆ ವಹಿಸಿದ್ದರು. ನಿಡ್ತ ಗ್ರಾಪಂ ಸದಸ್ಯ ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಿದರು.
ಸ್ವಾತಂತ್ರೃ ದಿನದ ಮಹತ್ವ ಕುರಿತು ಮುಖ್ಯಶಿಕ್ಷಕ ಸಿ.ಎಸ್.ಸತೀಶ್ ಮಾತನಾಡಿದರು. ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿ ಸಾರುವ ಮತ್ತು ಸ್ವತಂತ್ರ ಹೋರಾಟಗಾರರ ಕುರಿತಾದ ನೃತ್ಯ, ನಾಟಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಶಿಕ್ಷಕರಾದ ಜಾನ್‌ಪಾವ್ಲ್ ಡಿಸೋಜ, ಶೀಲಾ, ಮಕ್ಕಳ ಪಾಲಕರು, ಕುಟುಂಬದ ಹಿರಿಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net