ಕಾರ್ಯಕ್ರಮಕ್ಕೆ ಗೈರಾದರೆ ಶಿಸ್ತುಕ್ರಮ ನಿಶ್ಚಿತ

mkg
Published on

ಚನ್ನಗಿರಿ:ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಪ್ರತಿಯೊಬ್ಬ ಅಧಿಕಾರಿಯು ತಪ್ಪದೇ ಭಾಗವಹಿಸಬೇಕು. ಗೈರಾದರೆ ಅಂತಹವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಪಿ.ಎಸ್. ಯರ‌್ರಿಸ್ವಾಮಿ ಎಚ್ಚರಿಸಿದರು.

ಪಟ್ಟಣದ ತಾಲೂಕು ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅಚರಣೆ ಪೂರ್ವಭಾವಿ ಸಿದ್ಧ್ದತಾ ಸಭೆಯಲ್ಲಿ ಶುಕ್ರವಾರ ಅವರು ಮಾತನಾಡಿದರು.

ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಸೂಚಿಸಿದರು.

ಸ್ವಾತಂತ್ರ್ಯ ದಿನಾಚರಣೆಯನ್ನು ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಸಲು ಸಿದ್ಧತೆ ಮಾಡಲಾಗುತ್ತಿದೆ. ಧ್ವಜಾರೋಹಣವನ್ನು ತಹಸೀಲ್ದಾರ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಶಿವಗಂಗಾ ವಿ ಬಸವರಾಜ್ ವಹಿಸುವರು. ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಎಪಿಎಂಸಿ ಅಧ್ಯಕ್ಷರು ಸೇರಿದಂತೆ ಮತ್ತಿತರ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸ್ವ್ವಾತಂತ್ರ್ಯ ಹೋರಾಟಗಾರರು, ವಿವಿಧ ರಂಗಗಳಲ್ಲಿ ಸಾಧನೆ ಮಾಡಿದಂತ ಸಾಧಕರನ್ನು ಗೌರವಿಸಲಾಗುವುದು. ಬೆಳಗ್ಗೆ ಎಂಟು ಗಂಟೆಗೆ ಸರ್ಕಾರಿ ಬಾಲಿಕಾ ಪ್ರೌಢಶಾಲೆಯಿಂದ ಸ್ತಬ್ಧಚಿತ್ರಗಳ ಮೆರವಣಿಗೆ ಪ್ರಾರಂಭಿಸಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ತರಲಾಗುತ್ತದೆ ಎಂದು ಮಾಹಿತಿ ನೀಡಿದರು.

ಪ್ರತಿ ಸರ್ಕಾರಿ ಕಟ್ಟಡಕ್ಕೆ ಅ. 14 ಮತ್ತು 15ರಂದು ದೀಪಾಲಂಕಾರ ಮಾಡಬೇಕು, ಅನೇಕ ಕಡೆಗಳಲ್ಲಿ ಭಾವುಟ ಸರಿಯಾಗಿ ಧ್ವಜಾರೋಹಣ ನಡೆಸದೆ ಶಿಕ್ಷೆಗೆ ಗುರಿಯಾಗಿದ್ದಾರೆ. ಇನ್ಮುಂದೆ ಆ ರೀತಿ ಆಗಬಾರದು ಎಂದರು.

ಬಿಇಒ ಡಾ.ಎಸ್. ಶಂಕರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಶಿಧರ್, ತಾಲೂಕು ಆಹಾರ ನಿರೀಕ್ಷಕ ಜಯರಾಂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net