

ಜಗಳೂರು: ಆ. 15ರಂದು ನಡೆಯಲಿರುವ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮನೆಯಲ್ಲಿ ಸಂಭ್ರಮಿಸುವ ಹಿರಿಯರ ಹಬ್ಬದಂತೆ ಆಚರಿಸಲು ಸಿದ್ಧ್ದತೆ ಮಾಡಿಕೊಳ್ಳಬೇಕು ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಪಟ್ಟಣದ ಬೀದಿಗಳನ್ನು ಮದುವಣಗಿತ್ತಿಯಂತೆ ಸಿಂಗಾರಗೊಳಿಸಬೇಕು. ಕಾರ್ಯಕ್ರಮದಲ್ಲಿ ಸಣ್ಣ ಲೋಪವಾದರೂ ಸಹಿಸುವುದಿಲ್ಲ. ಬೆಳಗ್ಗೆ ತಮ್ಮ ಕಚೇರಿಗಳಲ್ಲಿ ಸಾಂಕೇತಿಕವಾಗಿ ಅಚರಿಸಿ ಬಯಲು ರಂಗ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.
ನಿವೃತ್ತ ಯೋಧರು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಬೇಕು ಎಂದರು.
ಗ್ರೇಡ್ 2 ತಹಸೀಲ್ದಾರ್ ಮಂಜಾನಂದ, ತಾಪಂ ಇಒ ಚಂದ್ರಶೇಖರ್, ಪಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಪ್ರಬಾರ ಬಿಇಒ ಸುರೇಶ್ ರೆಡ್ಡಿ, ಮುಖ್ಯಶಿಕ್ಷಕ ರಜಾಕ್ ಇದ್ದರು.