

ಕನಕಗಿರಿ: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಅಧಿಕಾರಿಗಳು ಹಾಗೂ ಶಿಕ್ಷಕರು ಅಗತ್ಯ ಸಿದ್ಧತೆ ಕ್ರಮ ಕೈಗೊಳ್ಳಬೇಕು ಎಂದು ನೂತನ ತಹಸೀಲ್ದಾರ್ ವಿಶ್ವನಾಥ ಮುರುಡಿ ಹೇಳಿದರು.
ಇದನ್ನೂ ಓದಿ:http://ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ
ಮಂಗಳವಾರದಂದು ಇಲ್ಲಿನ ತಹಶೀಲ್ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷದಂತೆ ಈ ಬಾರಿ ಸ್ವಾತಂತ್ರ್ಯೋತ್ಸವದಲ್ಲಿ ಶಾಲಾ ಮಕ್ಕಳಿಂದ ಪಥಸಂಚಲನ
, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುವುದು. ಈ ವರ್ಷದಿಂದ ತೆರೆದ ಜೀಪಿನಲ್ಲಿ ಧ್ವಜ ವಂದನೆ ಸ್ವೀಕರಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಿದ್ಧತೆಯನ್ನು ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಲಾಗಿದೆ ಎಂದರು.
ಧ್ವಜಾರೋಹಣಕ್ಕೆ ಬೇಕಾದ ಸೌಲಭ್ಯವನ್ನು ಮೈದಾನದ ಸ್ವಚ್ಛತೆ, ಕುಡಿವ ನೀರು, ವಿದ್ಯುತ್, ವೇದಿಕೆ ನಿರ್ಮಿಸಲು ಪ.ಪಂ ಮುಖ್ಯಾಧಿಕಾರಿ ದತ್ತಾತ್ರೆಯ ಹೆಗಡೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಇನ್ನೂ ಈ ಬಾರಿ ಹೊಸದಾಗಿ ಫಲಪುಷ್ಪ ಪ್ರದರ್ಶನ, ಕೃಷಿಗೆ ಸಂಬಂಧಿಸಿದ ಯೋಜನೆಗಳ ಮಾಹಿತಿ ತಂತ್ರಜ್ಞಾನ ಹಾಗೂ ವಾಂತಿಬೇಧಿ ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶ.
ದಿಂದ ತೋಟಗಾರಿಕೆ, ಕೃಷಿ, ಆರೋಗ್ಯ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಸಾರ್ವಜನಿಕ ಧ್ವಜಾರೋಹಣ ಸಮಾರಂಭದ ಸ್ಥಳದಲ್ಲಿ ಸಾಲು ಮಳಿಗೆಗಳನ್ನು ಅಳವಡಿಸುವಂತೆ ಸೂಚಿಸಿದರು.
ಪ್ರೋಟೊಕಾಲ್ ಪ್ರಕಾರ ವೇದಿಕೆಗೆ ಆಹ್ವಾನ : ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಅದ್ದೂರಿಯಾಗಿ ಕಾರ್ಯಕ್ರಮ ನಡೆಸಲು ಸ್ವಾತಂತ್ರೃ ಧ್ವಜಾರೋಹಣ ಕಾರ್ಯಕ್ರಮಕ್ಕೆ ಶಿಷ್ಠಾಚಾರದ ಪ್ರಕಾರ ಅಧಿಕಾರಿ ವರ್ಗದವರನ್ನು ವೇದಿಕೆಗೆ ಆಹ್ವಾನಿಸಲಾಗುವುದು. ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದು ತಹಸೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು.
9ಕೆಎನ್‌ಕೆ3