ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ

web 1
Published on

ಧಾರವಾಡ: ಜಿಲ್ಲೆಯಲ್ಲಿ ಆ. 15ರಂದು ಸ್ವಾತಂತ್ರ್ಯ ದಿನವನ್ನು ಅದ್ಧೂರಿಯಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು. ಮಳೆಗಾಲ ಇರುವುದರಿಂದ ಶಾಲಾ ಮಕ್ಕಳು, ಸಾರ್ವಜನಿಕರಿಗೆ, ಅತಿಥಿಗಳಿಗೆ ಕಾರ್ಯಕ್ರಮ ವೀಕ್ಷಣೆಗೆ  ತೊಂದರೆ ಆಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ವೇದಿಕೆ, ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಕವಾಯತು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ತಮಗೆ ನೀಡಿರುವ ಕಾರ್ಯಗಳನ್ನು ಪೂರೈಸಿ ವರದಿ ಸಲ್ಲಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಅಬಕಾರಿ ಇಲಾಖೆ ಉಪ ಆಯುಕ್ತ ಕೆ. ಪ್ರಶಾಂತಕುಮಾರ, ತಹಸೀಲ್ದಾರ್ ಡಾ. ಮೋಹನ ಭಸ್ಮೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net