

ಮಂಗಳೂರು: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ನಗರದ ದಕ್ಕೆಯಲ್ಲಿ ಶುಕ್ರವಾರ ಶುಕ್ರವಾರ ಆಯೋಜಿಸಿದ 75 ಬೋಟ್ ಗಳ ರ‌್ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್, ಉಪ ನಿರ್ದೇಶಕರಾದ ಸುಶ್ಮಿತಾ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮುಖಂಡರಾದ ರೇವತಿ, ರೇಖಾ, ಕರಾವಳಿ ಕಾವಲು ಪಡೆಯ ಅಧಿಕಾರಿಗಳು, ಟ್ರಾಲ್ ಬೋಟ್ ಯೂನಿಯನ್ ಅಧ್ಯಕ್ಷರು, ಸದಸ್ಯರು, ಜನ ಪ್ರತಿನಿಧಿಗಳು ಹಾಗೂ ಬೋಟ್ ಚಾಲಕರು, ಮಾಲಿಕರು ಇದ್ದರು.