ಸ್ವಾತಂತ್ರೃ ದಿನ ಸರಳ ಆಚರಣೆ

7SDT1-WEb
ಸವದತ್ತಿ ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿದರು. ತಾಪಂ ಇಒ ಯಶವಂತ ಕುಮಾರ, ತಹಸೀಲ್ದಾರ್ ಪ್ರಶಾಂತ ಪಾಟೀಲ, ಬಿಇಒ ಎನ್. ಕಂಬೋಗಿ, ತಾಲೂಕು ವೈದ್ಯಾಧಿಕಾರಿ ಮಹೇಶ ಚಿತ್ತರಗಿ ಇದ್ದರು.
Published on

ಸವದತ್ತಿ: ಕರೊನಾ ವೈರಸ್ ಹಿನ್ನೆಲೆಯಲ್ಲಿ ಸ್ವಾತಂತ್ರೃ ದಿನಾಚರಣೆಯನ್ನು ಸರಳ ಹಾಗೂ ಶಿಸ್ತು ಬದ್ಧವಾಗಿ ಆಚರಿಸಲಾಗುವುದು ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದ್ದಾರೆ.

ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸ್ವಾತಂತ್ರೃ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪಟ್ಟಣದ ಎಸ್.ಕೆ. ಕಾಲೇಜಿನಲ್ಲಿ 300 ಜನರಿಗಾಗುವಷ್ಟು ಸ್ಥಳಾವಕಾಶ ಒದಗಿಸಿ, ಸಮಾರಂಭ ನಡೆಸಲು ನಿರ್ಧರಿಸಲಾಗಿದೆ. ಅಂದು ಕರೊನಾ ಸೇನಾನಿಗಳನ್ನು ಸನ್ಮಾನಿಸಲಾಗುವುದು ಎಂದರು.

ಎಚ್ಚರ ವಹಿಸಿ: ಮಲಪ್ರಭೆ ಭರ್ತಿಯಾಗುವ ಹಂತ ತಲುಪಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರ ವಹಿಸಬೇಕು. ಮಳೆಯಿಂದ ಅನಾಹುತ ಸಂಭವಿಸದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಪಿಡಿಒಗಳು ಕೇಂದ್ರ ಸ್ಥಾನದಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು. ತಾಪಂ ಇಒ ಯಶವಂತ ಕುಮಾರ, ತಹಸೀಲ್ದಾರ್ ಪ್ರಶಾಂತ ಪಾಟೀಲ, ಬಿಇಒ ಎನ್. ಕಂಬೋಗಿ, ತಾಲೂಕು ವೈದ್ಯಾಧಿಕಾರಿ ಮಹೇಶ ಚಿತ್ತರಗಿ ಹಾಗೂ ತಾಲೂಕು ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net