ಸ್ವಾತಂತ್ರ್ಯೋತ್ಸವ ವಿಶೇಷ ಸಂಚಿಕೆ ಬಿಡುಗಡೆ

VISWADARSHAN
Published on

ಯಲ್ಲಾಪುರ: ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ, ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ವಿದ್ಯಾರ್ಥಿಗಳು ರೂಪಿಸಿರುವ ವಿಶೇಷ ಸಂಚಿಕೆ, ವಿಡಿಯೋ ಮತ್ತು ರೆಡಿಯೋ ಕಾರ್ಯಕ್ರಮಗಳ ಅನಾವರಣ ಕಾರ್ಯಕ್ರಮ ಗುರುವಾರ ನೆರವೇರಿತು.

ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದರು. ಸ್ವಾತಂತ್ರ್ಯ ಸಂಗ್ರಾಮದ ಸಮಗ್ರ ಚಿತ್ರಣವನ್ನು ಇದರಲ್ಲಿ ನೀಡಲಾಗಿದೆ.

ನಿವೃತ್ತ ಪ್ರಾಂಶುಪಾಲ, ಮೀಡಿಯಾ ಸ್ಕೂಲ್ ಉಪನ್ಯಾಸಕ ಬೀರಣ್ಣ ನಾಯಕ ಮೊಗಟಾ ಮತ್ತು ಮೀಡಿಯಾ ಸ್ಕೂಲ್ ಪ್ರಾಂಶುಪಾಲ ನಾಗರಾಜ ಇಳೆಗುಂಡಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶೋಭಾ ಗೌಡ ಸ್ವಾಗತಿಸಿ, ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net