

ತುಮಕೂರು: ಕರೊನಾ ಹಿನ್ನೆಲೆಯಲ್ಲಿ ಈ ಬಾರಿಯ ಸ್ವಾತಂತ್ರೊೃೀತ್ಸವವನ್ನು ಶಾಲಾಮಕ್ಕಳ ಸಡಗರ ಇಲ್ಲದೆ ಸರಳ ಹಾಗೂ ವಿಭಿನ್ನ ರೀತಿಯಲ್ಲಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ಜಿಪಂ ಸಭಾಂಗಣದಲ್ಲಿ ಬುಧವಾರ ಸ್ವಾತಂತ್ರ ದಿನಾಚರಣೆ ಪೂರ್ವಭಾವಿ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಕರೊನಾ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಸ್ವಾತಂತ್ರೊೃೀತ್ಸವ ಆಚರಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ಪರಸ್ಪರ ಅಂತರ ಹಾಗೂ ಜನಸಂದಣಿ ಇಲ್ಲದಂತೆ ರಾಷ್ಟ್ರೀಯ ಹಬ್ಬ ಆಚರಿಸಬೇಕು ಎಂದರು.
ಜಿಲ್ಲಾ ಮಟ್ಟದ ಕಚೇರಿಯಿಂದ ಗ್ರಾಪಂವರೆಗೂ ಸ್ವಾತಂತ್ರ್ಯ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು. ಜಿಲ್ಲಾ ಮಟ್ಟದಲ್ಲಿ ಈ ವರ್ಷವೂ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ವಾತಂತ್ರೊೃೀತ್ಸವ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.
ಕರೊನಾ ಹಿನ್ನೆಲೆಯಲ್ಲಿ ಈ ಬಾರಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಂಜೆಯ ಕಾರ್ಯಕ್ರಮವಿರುವುದಿಲ್ಲ. 18 ವರ್ಷಕ್ಕೂ ಮೇಲ್ಪಟ್ಟ ವಿದ್ಯಾರ್ಥಿಗಳ ಎನ್‌ಸಿಸಿ, ಸ್ಕೌಟ್ಸ್ ಹಾಗೂ ಪೊಲೀಸ್ ಕವಾಯಿತು ಇರುತ್ತದೆ. ಅಲ್ಲದೆ, ಪ್ರತಿ ಸರ್ಕಾರಿ ಕಚೇರಿಯಲ್ಲಿ ಅಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಸರ್ಕಾರಿ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ರಾಕೇಶ್ ಕುಮಾರ್ ಹೇಳಿದರು.
ಜಿಪಂ ಸಿಇಒ ಶುಭಾ ಕಲ್ಯಾಣ್ ಮಾತನಾಡಿ, ಡಿಜಿಟಲ್ ಪ್ಲಾಟ್‌ಫಾರಂ ಮೂಲಕ ಮಕ್ಕಳಿಗೆ ಕ್ವಿಜ್ ಮತ್ತಿತರ ಸ್ಪರ್ಧೆ, ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಿಕ್ಷಣ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್, ಪಾಲಿಕೆ ಆಯುಕ್ತೆ ರೇಣುಕಾ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಕರೊನಾ ಸೇನಾನಿಗಳಿಗೆ ಗೌರವ: ಈ ಬಾರಿಯ ಸ್ವಾತಂತ್ರೊೃೀತ್ಸವದಲ್ಲಿ ವೈದ್ಯರು, ಸ್ಟಾಫ್‌ನರ್ಸ್, ಪೌರಕಾರ್ಮಿಕರು ಸೇರಿ ಕರೊನಾ ಸೇನಾನಿಗಳನ್ನು ಗೌರವಿಸಲಾಗುವುದು. ಅಲ್ಲದೆ, ಸ್ವಾತಂತ್ರೊೃೀತ್ಸವವನ್ನು ಸ್ಥಳೀಯ ಕೇಬಲ್, ಫೇಸ್‌ಬುಕ್ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಕೈಗೊಳ್ಳಬೇಕು. ಅಲ್ಲದೆ, ಜಿಲ್ಲೆಯ ಜನರು ಮನೆಯಲ್ಲಿಯೇ ಕುಳಿತು ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಲು ಅನುವು ಮಾಡಿಕೊಡಲು ಜಿಲ್ಲಾಧಿಕಾರಿ ಸಲಹೆ ನೀಡಿದರು