

ಮಡಿಕೇರಿ:
ತೀವ್ರತರವಾದ ಮತ್ತು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್‌ಗಳನ್ನು ತಲುಪಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ನಿರ್ಮೂಲನೆ ಸಂಬAಧಿಸಿದAತೆ 2 ಸುತ್ತಿನ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.
ವಿವಿಧ ಕಾರಣಗಳಿಂದ ಬಿಟ್ಟು ಹೋಗಿರುವ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ನಿರ್ಮೂಲನೆ ಮಾಡಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಸಂಬAಧಿಸಿದAತೆ ವಿಶೇಷವಾಗಿ ದಡಾರ ಮತ್ತು ರುಬೆಲ್ಲಾ ರೋಗ ನಿರೋಧಕತೆಯ ಅಂತರ ಕಡಿಮೆ ಮಾಡುವುದು, ಇದುವರೆಗೆ ಲಸಿಕೆ ಡೋಸ್ ಪಡೆಯದಿದ್ದಲ್ಲಿ ಲಸಿಕೆಯನ್ನು ತಲುಪಿಸುವುದು, ಲಸಿಕೆ ಪಡೆದಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಹಾಗೆಯೇ ಹೊಸ ಲಸಿಕೆಗಳ ಲಸಿಕಾ ಪ್ರಗತಿಯನ್ನು ಹೆಚ್ಚಿಸುವುದು ಪ್ರಮುಖ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಮುಂದಾಗುವAತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ವಲಸಿಗ 5 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರನ್ನು ಪತ್ತೆ ಹಚ್ಚಿ ಅರ್ಹರಿಗೆ ಲಸಿಕೆ ನೀಡುವಂತಾಗಬೇಕು. ತಾಲ್ಲೂಕುವಾರು ಮಾಹಿತಿಯನ್ನು ನಿಖರವಾಗಿ ಒದಗಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಅವರು ಮಾಹಿತಿ ನೀಡಿ ಮಿಷನ್ ಇಂದ್ರಧನುಷ್ ಅನುಷ್ಠಾನ ಸಂಬAಧಿಸಿದAತೆ ಮೊದಲ ಸುತ್ತಿನಲ್ಲಿ ಶೇಕಡವಾರು ಪ್ರಗತಿ ಸಾಧಿಸಲಾಗಿದೆ. ಸೆಪ್ಟೆಂಬರ್, 11 ರಿಂದ 16 ರವರೆಗೆ ಎರಡನೇ ಸುತ್ತಿನಲ್ಲಿ ಮಿಷನ್ ಇಂದ್ರಧನುಷ್ ಲಸಿಕಾಕರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭಿಣಿಯರು ಮತ್ತು 5 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಅಧಿಕಾರಿ ಮತ್ತು ಆಶಾ ಕಾರ್ಯಕರ್ತರಿಗೆ ನೀಡುವಂತಾಗಬೇಕು. ಮನೆ ಮನೆಗೆ ಭೇಟಿ ಮಾಡಿ ಲಸಿಕೆ ಪಡೆಯಬೇಕಿರುವ, ಇದುವರೆಗೆ ಪಡೆಯದಿರುವ ಬಗ್ಗೆ ಖಾತರಿಪಡಿಸಿಕೊಳ್ಳುವಂತೆ ಕೋರಿದರು.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ತೀವ್ರತರವಾದ ಇಂದ್ರಧನುಷ್ 5.0 ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸುವುದು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳನ್ನು ಗುರುತಿಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತಾಗಬೇಕು. ಜೊತೆಗೆ ಸ್ಥಳೀಯವಾಗಿ ಟಾಮ್ ಟಾಮ್ ಮೂಲಕ ಮಾಹಿತಿ ನೀಡುವಂತಾಗಬೇಕು ಎಂದರು.
ಕೊಡಗು ಜಿಲ್ಲೆಯಲ್ಲಿ 8 ದಡಾರ ಮತ್ತು 1 ರುಬೆಲ್ಲಾ ಪ್ರಕರಣ ವರದಿಯಾಗಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ ಎಂದು ಡಾ.ಆನಂದ್ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಲವು ಆರೋಗ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಸರ್ಜನ್ ಡಾ.ನಂಜುAಡಯ್ಯ, ಡಾ.ಸುಧೀರ್ ನಾಯಕ್, ಐಟಿಡಿಪಿ ಅಧಿಕಾರಿ ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ಡಾ.ಚೇತನ್, ಡಾ.ಶ್ರೀನಿವಾಸ್, ಡಾ.ಪುರುಷೋತ್ತಮ, ನಗರಸಭೆ ಎಂಜಿನಿಯರ್ ಸೌಮ್ಯ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಇತರರು ಇದ್ದರು.