ಮಕ್ಕಳನ್ನು ಶಾಲೆಗೆ ಕಳುಹಿಸಿ

Indi-14-1
Published on

ಇಂಡಿ: ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಶಿಕ್ಷಕರು ನೋಡಿಕೊಳ್ಳಬೇಕು. ಪಾಲಕರು ಸಹ ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಸಿ.ಎಂ.ಬಂಡಗಾರ ಹೇಳಿದರು.

ತಾಲೂಕಿನ ಹಿರೇಮಸಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜರುಗಿದ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ ಮತ್ತು ಮಕ್ಕಳ ದಾಖಲಾತಿ ಅಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಆರ್‌ಪಿ ಐ.ಜಿ.ಆಳೂರ, ಆರ್.ಎಂ.ಮೇತ್ರಿ, ತಮ್ಮಣ್ಣ ಗಿಣ್ಣಿ, ಶ್ರೀಧರ ಹಿಪ್ಪರಗಿ, ಗುರುಗಳಾದ ಆರ್.ಬಿ.ಸೌದಾಗರ, ಆನಂದ ಕೆಂಭಾವಿ, ಎಸ್.ಎಸ್.ಸಲಿ, ಗ್ರಾಪಂ ಅಧ್ಯಕ್ಷರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net