ಅಕ್ರಮ ಕಳ್ಳಬಟ್ಟಿ ಸಾಗಿಸುತ್ತಿದ್ದ ವ್ಯಕ್ತಿಗಳ ಬಂಧನ

Indi 20-1
Published on

ಇಂಡಿ: ತಾಲೂಕಿನ ಧೂಳಖೇಡ ತನಿಖಾ ಠಾಣೆ ಎದುರುಗಡೆ ಅಕ್ರಮವಾಗಿ ಮಹಾರಾಷ್ಟ್ರದಿಂದ ದ್ವಿಚಕ್ರ ವಾಹನಗಳ ಮೇಲೆ ಕಳ್ಳಬಟ್ಟಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಇಂಡಿ ವಲಯದ ಅಬಕಾರಿ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿ 16 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ರೇವಪ್ಪಮಡ್ಡಿಯ ಮಲ್ಲಿಕಾರ್ಜುನ ಶಂಕರ ಜತ್ತಿ, ಮಾಲಪ್ಪ ಭೀರಪ್ಪ ಡಂಬಳ ಆರೋಪಿಗಳಾಗಿದ್ದು, ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇಂಡಿ ವಲಯದ ಅಬಕಾರಿ ನಿರೀಕ್ಷಕ ಎಂ. ಎಚ್. ಪಡಸಲಗಿ ಅವರ ನೇತೃತ್ವದಲ್ಲಿ ಉಪ ನಿರೀಕ್ಷಕ ಎಸ್.ಎಂ. ಬಿರಾದಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಧೂಳಖೇಡ ತನಿಖಾ ಠಾಣೆಯ ಅಬಕಾರಿ ಉಪ ನಿರೀಕ್ಷಕ ಸದಾಶಿವ ಕೊರ್ತಿ ಹಾಗೂ ಸಿಬ್ಬಂದಿಗಳಾದ ಶಿವಶಂಕರ ಗೊಟ್ಯಾಳ, ಮಂಜುನಾಥ ಬಡಿಗೇರ, ಎಸ್.ಟಿ. ದಳವಾಯಿ, ಎ. ಎಸ್. ಗೊಣಸಗಿ, ಎಸ್. ಎಸ್. ಕೊಡತೆ ದಾಳಿಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net