ದೂರು ದಾಖಲಾದರೆ ತ್ವರಿತ ಕ್ರಮ ಕೈಗೊಳ್ಳಿ

Indi, Scheduled Caste, Tribe, Atrocity, Revenue Sub-Divisional Officer, Abid Gadyal,
ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಉಪವಿಭಾಗೀಯ ಮಟ್ಟದ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಎಸಿ ಅಬೀದ್ ಗದ್ಯಾಳ ಮಾತನಾಡಿದರು. ಡಿವೈಎಸ್‌ಪಿ ಜಗದೀಶ, ಉಮೇಶ ಲಮಾಣಿ, ಬಿ.ಎಸ್. ಕಡಕಬಾವಿ ಇತರರಿದ್ದರು.
Published on

ಇಂಡಿ: ಅನುಸೂಚಿತ ಜಾತಿ, ಪಂಗಡದ ಜನರ ಮೇಲೆ ದೌರ್ಜನ್ಯ ನಡೆದ ದೂರು ದಾಖಲಾದರೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಬಂಧಿತ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದ ಕಂದಾಯ ಉಪವಿಭಾಗಾಧಿಕಾರಿ ಕಚೇರಿ ಸಭಾಭವನದಲ್ಲಿ ಶುಕ್ರವಾರ ನಡೆದ ಉಪವಿಭಾಗೀಯಮಟ್ಟದ ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿ ಹಾಗೂ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಪರಿಶಿಷ್ಟ ಜಾತಿ, ಪಂಗಡದವರು ವಿವಿಧ ಯೋಜನೆಗಳ ಸಾಲ ಸೌಲಭ್ಯ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಿ ಶೀಘ್ರ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.

ಡಿವೈಎಸ್‌ಪಿ ಜಗದೀಶ ಮಾತನಾಡಿ, ದೌರ್ಜನ್ಯದಲ್ಲಿ ನೊಂದ ಸಂತ್ರಸ್ತರಿಗೆ ತಕ್ಷಣ ಇಲಾಖೆಯಿಂದ ಪರಿಹಾರ ಧನ ನೀಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಮಾತನಾಡಿ, ಜನವರಿ 2024 ರಿಂದ ಇಲ್ಲಿಯವರೆಗೆ 17 ಪ್ರಕರಣ ದಾಖಲಾಗಿದ್ದು, ಅದರಲ್ಲಿ 9 ಪ್ರಕರಣಗಳಿಗೆ ಪರಿಹಾರ ನೀಡಿದ್ದು ಉಳಿದ 8 ಪ್ರಕರಣಗಳ ಪರಿಹಾರ ಸದ್ಯದಲ್ಲಿಯೇ ಬರಲಿದೆ ಎಂದರು.

ತಹಸೀಲ್ದಾರ್ ಬಿ.ಎಸ್. ಕಡಕಬಾವಿ, ನಾಮ ನಿರ್ದೇಶನ ಸದಸ್ಯರಾದ ಶಿವಾನಂದ ಮೂರಮನ, ಸತ್ಯಣ್ಣ ಹಡಪದ, ಸಿಂದಗಿ ಸಮಾಜ ಕಲ್ಯಾಣ ಅಧಿಕಾರಿ ಭವಾನಿ ಪಾಟೀಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net