

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ವಿದ್ಯಾಗಿರಿ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸಿಬಿಎಸ್‌ಇ ಶಾಲೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಭಾಜನವಾಗಿದೆ. ಖೇಲೋ ಸ್ಪೋರ್ಟ್ಸ್ ಇಂಡಿಯಾ ಸಹಯೋಗದಲ್ಲಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 77ನೇ ಜನ್ಮದಿನ ಆಚರಣೆ ಸಂದರ್ಭದಲ್ಲಿ ಶಾಲೆಯ 3,200 ವಿದ್ಯಾರ್ಥಿಗಳು ಭಾಗವಹಿಸಿ 1 ನಿಮಿಷ ಫಿಸಿಕಲ್ ಫಿಟ್ನೆಸ್ ಮಾಡಿದ್ದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದೆ.
ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಅವರು ದಾಖಲೆಯ ಪ್ರಮಾಣಪತ್ರವನ್ನು ಸಿಬಿಎಸ್‌ಇ ಶಾಲೆಯ ಪ್ರಾಚಾರ್ಯೆ ಸಾಧನಾ ಎಸ್ ಅವರಿಗೆ ಹಸ್ತಾಂತರಿಸಿದರು. ಮಹಾವೀರ ಉಪಾದ್ಯೆ, ವಿಶಾಲ ಸಿಂಗ್ ಮತ್ತು ಸಂಜೀವ ಉಪಸ್ಥಿತರಿದ್ದರು.