

ನರಗುಂದ: ಪಟ್ಟಣದ ಶ್ರೀ ಯಡೆಯೂರ ಸಿದ್ದಲಿಂಗೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜ್‌ನಲ್ಲಿ ಶುಕ್ರವಾರ ಯೋಗ ದಿನ ಆಚರಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಎಂ.ವಿ. ಪಾಟೀಲ ಮಾತನಾಡಿ, ಇಡೀ ವಿಶ್ವದಲ್ಲಿ ಯೋಗದ ಪರಿಕಲ್ಪನೆ ಮೂಡಿಸಿದ ಮೊದಲ ರಾಷ್ಟ್ರ ಭಾರತ. ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಯೋಗ ದಿಚಾಚರಣೆಯ ಮಹತ್ವ ಅರಿತುಕೊಳ್ಳಬೇಕು. ಪ್ರತಿ ದಿನ ಯೋಗ ಮಾಡುವುದರಿಂದ ಮಾನವನ ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗಲಿದೆ ಎಂದರು.
ನಂತರ ಯೋಗಾಭ್ಯಾಸ ಮಾಡಲಾಯಿತು. ಪ್ರಾಚಾರ್ಯ ಎಂ.ಜಿ. ಭೊಗಾರ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.