ಅಭಿವೃದ್ಧಿಯ ಸಂಕಲ್ಪದೊಂದಿಗೆ ಸಾಗುತ್ತಿರುವ ಭಾರತ

15Kush01
ಕೂಡಿಗೆಯ ಆಂಜೆಲಾ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Published on

ಕುಶಾಲನಗರ: ಹೊಸ ಇಂಧನ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭಾರತ ವಿಶ್ವದ ಪ್ರಬಲ ಧ್ವನಿಗಳಲ್ಲಿ ಒಂದಾಗಿದೆ ಎಂದು ಕೂಡಿಗೆಯ ಆಂಜೆಲಾ ವಿದ್ಯಾನಿಕೇತನ ಶಾಲೆ ಮುಖ್ಯ ಶಿಕ್ಷಕಿ ವೀಣಾವಿಜಯ ಅಭಿಪ್ರಾಯಪಟ್ಟರು.

ಕೂಡಿಗೆಯ ಆಂಜೆಲಾ ಶಾಲಾ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಇಂಧನ ಉಳಿತಾಯ ಸಪ್ತಾಹ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಕಸಿತ ಭಾರತ ಅಭಿವೃದ್ಧಿಯ ಸಂಕಲ್ಪದೊಂದಿಗೆ ಸಾಗುತ್ತಿದ್ದು, ಅಭೂತಪೂರ್ವ ಸಾಧ್ಯತೆಗಳು ಹೊರಹೊಮ್ಮುತ್ತಿವೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಸಿಸ್ಟರ್ ರೇಖಾ ಫನಾರ್ಂಡೀಸ್ ಮಾತನಾಡಿ, ದೇಶೀಯ ಅನ್ವೇಷಣೆ ಮತ್ತು ಉತ್ಪಾದನೆಗೆ ಭಾರತ ಹೆಚ್ಚಿನ ಮಹತ್ವ ನೀಡಿದೆ. ಅಲ್ಲದೆ ಭಾರತದಲ್ಲಿ ಇಂಧನ ವಿಚಾರವಾಗಿ ಅಭಿವೃದ್ಧಿ ಅತ್ಯಂತ ವೇಗವಾಗಿ ನಡೆಯುತ್ತಿದೆ ಎಂದರು.

ಶಾಲಾ ವಿದ್ಯಾರ್ಥಿಗಳು ಇಂಧನ ಉಳಿತಾಯ ಕುರಿತು ಮಾತನಾಡಿದರು. ಶಾಲಾ ಶಿಕ್ಷಕ ವೃಂದ ಸೇರಿದಂತೆ ವಿಧ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net