ಸಂವಿಧಾನ ಜಾಗೃತಿ ಜಾಥಾ: ಗದಗ ನಗರದಲ್ಲಿ ಬೈಕ ರ್ಯಾಲಿ ಆಯೋಜನೆಗೆ ಸೂಚನೆ

IMG-20240206-WA0066
Published on

ಗದಗ: ಭಾರತದ ಸಂವಿಧಾನ ಅಂಗೀಕಾರಗೊಂಡು ಎಪ್ಪತ್ತೈದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಸಂವಿಧಾನ ಜಾಥಾಗೆ ಈಗಾಗಲೇ ಚಾಲನೇ ನೀಡಲಾಗಿದ್ದು. ಸಾರ್ವಜನಿಕರಲ್ಲಿ ಸಂವಿಧಾನದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಬೈಕ ರ್ಯಾಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್.ಸೂಚನೇ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಂವಿಧಾನ ಜಾಗೃತಿ ಜಾಥಾ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆಗೊಂಡ ಸಂವಿಧಾನ ಜಾಥಾ ರೂಪಕ ಈಗಾಗಲೇ ಜಿಲ್ಲಾದ್ಯಂತ ಸಂಚಾರ ಕೈಗೊಳ್ಳುತ್ತಿದೆ. ಸಾರ್ವಜನಿಕರಲ್ಲಿ ಸಂವಿಧಾನದ ಮೂಲ ಆಶಯಗಳ ಕುರಿತು ಸಾರ್ವಜನಿರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ನಗರದಲ್ಲಿ ಬೈಕ ರ್ಯಾಲಿ ಆಯೋಜಿಸಿ, ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಪಾಲ್ಗೊಳ್ಳುವಂತೆ ಕ್ರಮ ವಹಿಸುವಂತೆ ತಿಳಿಸಿದರು.

ಜಿಲ್ಲಾ ಮಟ್ಟದ ಹಾಗೂ ಗದಗ ತಾಲೂಕಿನ ಎಲ್ಲ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜಿಲ್ಲಾಡಳಿತದಿಂದ ಆರಂಭವಾಗುವ ಸಂವಿಧಾನ ಜಾಗೃತಿ ಬೈಕ ರ್ಯಾಲಿಯಲ್ಲಿ ತಪ್ಪದೇ ಪಾಲ್ಗೊಳ್ಳಬೇಕು. ಹಾಗೂ ಇಲಾಖೆ ವಾಹನಗಳನ್ನು ಬಳಸಿಕೊಂಡು ಸಂವಿಧಾನ ಜಾಗೃತಿ ಮೂಡಿಸುವ ಕಾರ್ಯಕ್ಕೆ ಇಲಾಖೆಯ ನೌಕರರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚಿಸಿದರು.

ಬೈಕ ರ್ಯಾಲಿಯ ಮಾರ್ಗ, ಕ್ರಮಿಸಬೇಕಾದ ದೂರದ ಬಗ್ಗೆ ವಿಸ್ತøತವಾದಂತಹ ರೂಪು ರೇಷೆಗಳನ್ನು ಹಾಗೂ ಸಂವಿಧಾನದ ಮಹತ್ವ ಸಾರುವ ಫಲಕಗಳನ್ನು ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ನಿರ್ಮಲಾ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net