ಭಾರತ ಸಂವಿಧಾನವು ಜಗತ್ತಿನಲ್ಲಿಯೇ ಅತೀ ಶ್ರೇಷ್ಟ : ನ್ಯಾಯಾಧೀಶರಾದ ಬಾಳಾ ಸಾಹೇಬ್ ವಡ್‌ವಡೆ

ಭಾರತ ಸಂವಿಧಾನವು ಜಗತ್ತಿನಲ್ಲಿಯೇ ಅತೀ ಶ್ರೇಷ್ಟವಾದ photo-4 date 14-03-2025
Published on

ಪ್ರತಿಯೊಬ್ಬ ವಿದ್ಯಾರ್ಥಿಗಳು ಸಂವಿಧಾನವನ್ನು ತಿಳಿಯುವ ಕಾರ್ಯವಾಗಬೇಕು

ಯಾದಗಿರಿ : ಸಂವಿಧಾನದ 21 ಎ ವಿಧಿಯು 6 ರಿಂದ 14 ವರ್ಷದ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಹಕ್ಕನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಬಳಸಿಕೊಳ್ಳಬೇಕು ಎಂದು ಗೌರವಾನ್ವಿತ ಸಿವಿಲ್ ನ್ಯಾಯಾಧೀಶರಾದ ಶ್ರೀ ಬಾಳಾ ಸಾಹೇಬ್ ವಡ್‌ವಡೆ ಅವರು ಹೇಳಿದರು.

ಯಾದಗಿರಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಇತ್ತೀಚಿನ ನಡೆದ ಜಿಲ್ಲಾ ಕಾನೂನು ಸೇವೆಗಳ ಪಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಹಾಗೂ ವಿವಿಧ ಇಲಾಖೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪಯೋಜನೆ (ಟಿ.ಎಸ್.ಪಿ)ಯಡಿ “ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ತಿದ್ದುಪಡಿ ಕಾಯ್ದೆ 2016ರ” ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಸಂವಿಧಾನವು ಜಗತ್ತಿನಲ್ಲಿಯೇ ಅತೀ ಶ್ರೇಷ್ಟವಾದ ಸಂವಿಧಾನವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗಳು ಸಂವಿಧಾನವನ್ನು ತಿಳಿಯುವÀ ಕಾರ್ಯವಾಗಬೇಕು ಎಂದರು. ಹಾಗೂ ಸಂವಿಧಾನದ 21 ಎ ವಿಧಿಯು 6 ರಿಂದ 14 ವರ್ಷದ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಹಕ್ಕನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಬಳಸಿಕೊಳ್ಳಬೇಕೆಂದು ತಿಳಿಸಿದರು. ನಂತರ ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಶ್ರೀಹರಿ ಆರ್ ದೇಶಪಾಂಡೆ ರವರು ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ಕುರಿತು ಪ್ರತಿಯೊಬ್ಬರು ಕೂಡ ತಮ್ಮ ಪಾಲಕರಿಗೆ ತಿಳಿಸಬೇಕು ಹಾಗೂ ಪ್ರತಿಯೊಂದು ಮಗುವು ತನ್ನ ಹಕ್ಕುಗಳಿಂದ ವಂಚಿತನಾಗದAತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಪಾಲಕ, ಪೋಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ದೌರ್ಜನ್ಯ ತಡೆ ಸಲಹಾ ಸಮಿತಿ ಸದಸ್ಯರಾದ ಶ್ರೀ ಮರೆಪ್ಪ ಚಟ್ಟೇರ್‌ಕರ್ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಬರೆದಂತಹ ಭಾರತ ಸಂವಿಧಾನವು ಜಗತ್ತಿನಲ್ಲಿಯೇ ಅತೀ ಶ್ರೇಷ್ಠವಾದ ಗ್ರಂಥವಾಗಿದ್ದು, ಸಂವಿಧಾನ ನಿರ್ಮಾತೃ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಸಾವಿತ್ರಿ ಬಾಯಿ ಪುಲೆರವರು ಎಲ್ಲಾ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕೆಂದು ತಿಳಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಶ್ರೀ ರಿಯಾಜ್ ಪಟೇಲ್ ವರ್ಕನಳ್ಳಿ ಅವರು ಮಾತನಾಡಿ, ಓದುವ ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳುಹಿಸುವುದು ಮತ್ತು ಅಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನು ಬಾಹಿರ ಕ್ರಮವಾಗಿದ್ದು, ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ 20,000 ರಿಂದ 50,000 ರೂ.ಗಳ ವರೆಗೆ ದಂಡ ವಿಧಿಸಲಾಗುವುದು ಮತ್ತು 6 ತಿಂಗಳಿAದ 2 ವರ್ಷದವರೆಗೆ ಜೈಲು ಶಿಕ್ಷೆ ಗಳನ್ನು ಸಹ ವಿಧಿಸಲಾಗುವುದೆಂದು ಹಾಗೂ ಶಾಲೆಗೆ ಹೋಗುವ ಮಕ್ಕಳನ್ನು ಶಾಲೆ ಬಿಡಿಸಿ ಆಟೋ, ಟಂಟAಗಳಲ್ಲಿ ಕೃಷಿ ಹಾಗೂ ಇನ್ನಿತರ ಕೃಷಿ ಚಟುವಟಿಕೆ ಕೆಲಸಕ್ಕೆ ಕರೆದುಕೊಂಡು ಹೋಗುವುದು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ 1098 ಕ್ಕೆ ಪೋನ್ ಮಾಡಿ ತಿಳಿಸಿದರೆ ಅಂತಹ ಮಕ್ಕಳನ್ನು ರಕ್ಷಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಉಪನ್ಯಾಸಕರು ಹಾಗೂ ಹಿರಿಯ ಸಾಹಿತಿಗಳಾದ ಶ್ರೀ ಗುರುಪ್ರಸಾದ ವೈದ್ಯ ಅವರು ಮಾತನಾಡಿ, “ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ತಿದ್ದುಪಡಿ ಕಾಯ್ದೆ 2016ರ” ಕುರಿತು ಉಪನ್ಯಾಸ ನೀಡಿದರು.

ಬಾಲ, ಕಿಶೋರ ಕಾರ್ಮಿಕ ಪದ್ಧತಿ ನಿಷೇಧದ ಕುರಿತು ಆಯೋಜಿಸಿದ್ದ ಚಿತ್ರಕಲೆ, ಪ್ರಭಂಧ, ಭಾಷಾಣ ಸ್ಪರ್ದೇಯಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಹುಮಾನಗಳನ್ನು ಸಹ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯಾದಗಿರಿ ಕಾರ್ಮಿಕ ನಿರೀಕ್ಷಕರಾದ ಸಂಗೀತಾ ಹೊನ್ನೂರು, ಸಿ.ಆರ್.ಪಿ ರವಿಚಂದ್ರ ನಾಯ್ಕಲ್, ಬಿ.ಆರ್.ಪಿ ವೆಂಕಟರೆಡ್ಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಡಾ.ಬಿ.ಆರ್ ಅಂಬೇಡ್ಕರ್ ನಗರದ ಎಸ್.ಡಿ.ಎಮ್.ಸಿ ಅಧ್ಯಕ್ಷರು ಶ್ರೀ ಅಂಬ್ರೇಶ್ ಚಟ್ಟೇರ್‌ಕರ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಡಾ.ಬಿ.ಆರ್ ಅಂಬೇಡ್ಕರ್ ನಗರದ ಮುಖ್ಯ ಗುರುಗಳಾದ ಶ್ರೀಮತಿ ಸುಮತಿ ಪಾಪು, ಶಾಲೆಯ ಸಹ ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷಿö್ಮÃ, ಶ್ರೀಮತಿ ಶಶಿಕಲಾ, ಶ್ರೀಮತಿ ರೂಪಾ ಕೆ.ಎನ್, ಶ್ರೀಮತಿ ಮಂಜುಳಾ, ಶ್ರೀಮತಿ ಶೋಭಾದೇವಿ, ಅತಿಥಿ ಶಿಕ್ಷಕರಾದ ಮಹಿಪಾಲರೆಡ್ಡಿ, ಭೀಮರೆಡ್ಡಿ, ಭಾರತಿ, ಮಾರ್ಗದರ್ಶಿ ಸಂಸ್ಥೆಯ ಶ್ರೀಮತಿ ಆಶಾ ಬೇಗಂ, ಚನ್ನಮ್ಮ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳಾದ ದೀಪಕ್ ಸಿಂಗ್, ಅಂಬ್ರೇಶ ಶೆಹರ್‌ವಾಲೆ, ವೆಂಕಟೇಶ ಶಿವಾಂಗೆ, ಬಾಲು ನಾಯಕ, ಅಮೃತ್ ರಾವ್ ಕೋತ್ವಾಲ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net