ಭಾರತೀಯ ಸಂಸ್ಕೃತಿ ಜಗತ್ತಿಗೆ ಮಾದರಿ

Indian culture is a model for the world
ಬಾಗಲಕೋಟೆ ವಿದ್ಯಾಪ್ರಸಾರಕ ಮಂಡಳದ ಎಸ್.ಆರ್. ನರಸಾಪುರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಐದು ದಿವಸಗಳ ವಾಣಿಜ್ಯೋತ್ಸವ ಅಂಗವಾಗಿ ಶುಕ್ರವಾರ ಹಮ್ಮಿಕೊಂಡ ಸಾಂಪ್ರದಾಯಿಕ ಉಡುಗೆ-ತೊಡುಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳು, ಪ್ರಾಧ್ಯಾಪಕರು.
Published on

ಬಾಗಲಕೋಟೆ: ಭಾರತೀಯ ಸಂಸ್ಕೃತಿ ಜಗತ್ತಿಗೆ ಮಾದರಿಯಾಗಿದ್ದು, ಯುವ ಸಮುದಾಯ ಅದರ ರಕ್ಷಣೆಯನ್ನು ಮಾಡಬೇಕು ಎಂದು ಪ್ರಾಚಾರ್ಯ ಡಾ.ವಿ.ಎಸ್.ಮಠ ಹೇಳಿದರು.

ಇಲ್ಲಿನ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್. ನರಸಾಪುರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಐದು ದಿವಸಗಳ ವಾಣಿಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡ ಸಾಂಪ್ರದಾಯಿಕ ಉಡುಗೆ-ತೊಡುಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಯುವಕರು ಪಾಶ್ಚಾತ್ಯ ಶೈಲಿಯ ಉಡುಗೆಗೆ ಮಾರು ಹೋಗದೆ ನಮ್ಮ ಸಂಸ್ಕೃತಿಯ ಹಿರಿಮೆ-ಗರಿಮೆ ಅರಿಯಬೇಕು. ಅಂದಾಗ ಭಾರತೀಯತೆ ಉಳಿಯಲು ಸಾಧ್ಯ ಎಂದರು. ವಾಣಿಜ್ಯೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಪ್ರತಿಭೆ ತೋರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಈ ಪರಂಪರೆ ಮುಂದುವರಿಯಬೇಕು ಎಂದರು.

ವಿಭಾಗ ಮುಖ್ಯಸ್ಥ ಶ್ರೀನಿವಾಸ ನರಗುಂದ ಮಾತನಾಡಿ, ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಈ ದಿಶೆಯಲ್ಲಿ ಪಠ್ಯಪೂರಕ ಕಾರ್ಯಕ್ರಮಗಳು ಸಹಕಾರಿಯಾಗಬಲ್ಲವು. ಶನಿವಾರ ನಡೆಯಲಿರುವ ಅಣುಕು ಸಂದರ್ಶನದ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು.

ಪ್ರಾಧ್ಯಾಪಕ ಡಾ.ಎಚ್.ಎಸ್.ಗಿಡಗಂಟಿ, ಎನ್.ಬಿ.ಹಸಬಿ, ಬಿ.ಡಿ.ಮಾದರ, ಎಚ್.ಜಿ.ಗೌಡರ, ಎನ್.ಎಚ್.ಹವಾಲ್ದಾರ, ಎಸ್.ಪಿ.ದೇಶಪಾಂಡೆ, ಶ್ರೀಕಾಂತ ಹಡಪದ, ಎ.ಎ.ಗಂಗಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net