ವಿಶ್ವದ ಗಮನ ಸೆಳೆದ ಭಾರತೀಯ ಸಂಸ್ಕೃತಿ

13 HRS 02
ಹಿರೀಸಾವೆ ಗ್ರಾಮದ ಶಾರದ ಅನಿಕೇತನ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
Published on

ಹಿರೀಸಾವೆ: ಭಾರತದಲ್ಲಿರುವ 64 ವಿದ್ಯೆಗಳನ್ನು ಕಲಿಯುವ ಸಲುವಾಗಿ ದೇಶ-ವಿದೇಶಿಯರು ಲಗ್ಗೆ ಹಿಡುತ್ತಿದ್ದಾರೆ ಎಂದು ಶಿಕ್ಷಣ ಸಂಯೋಜಕ ರವೀಂದ್ರ ಹೇಳಿದರು.

ಪಟ್ಟಣದ ಶಾರದ ಅನಿಕೇತನ ವಿದ್ಯಾಸಂಸ್ಥೆಯ ಆವರಣದಲ್ಲಿ ತಾಲೂಕು ಶಿಕ್ಷಣ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರೌಢಶಾಲೆಗಳ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಕಲೆಗಳು ವಿಶ್ವದ ಗಮನ ಸೆಳೆದಿವೆ. ಮಕ್ಕಳಲ್ಲಿ ಶಿಕ್ಷಣದ ಸವಾರ್ಂಗೀಣ ಅಭಿವೃದ್ಧಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಬಹಳ ಮುಖ್ಯ ಎಂಬುದನ್ನು ಶಿಕ್ಷಣ ಇಲಾಖೆಯು ಅರಿತು ಈ ಕಾರ್ಯಕ್ರಮವನ್ನು ಪ್ರತಿ ವರ್ಷ ಆಯೋಜನೆ ಮಾಡುತ್ತಿದೆ. ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರದಲ್ಲಿನ ಸಾಧನೆಗೆ ಗೌರವ ಇದೆ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಉದಯಕುಮಾರ್ ಮಾತನಾಡಿ, ಮೊಬೈಲ್‌ನಿಂದಾಗಿ ಸಂಬಂಧಗಳು ದೂರವಾಗುತ್ತಿವೆ. ಹೀಗಾಗಿ ಪಾಲಕರು ಸಂಬಂಧಗಳ ಬಗ್ಗೆ ತಿಳಿಸಬೇಕು. ಶಿಕ್ಷಣದ ವಿಚಾರದಲ್ಲಿ ಹೆಚ್ಚು ಅಂಕಗಳಿಸುವಂತೆ ಒತ್ತಡ ಹೇರಲಾಗುತ್ತಿದ್ದು, ಇದರಿಂದ ಮಕ್ಕಳ ಇತರ ಚಟುವಟಿಕೆಗಳು ಕುಂಠಿತವಾಗುತ್ತಿವೆ ಎಂದರು.

ಪ್ರತಿಭಾ ಕಾರಂಜಿಯಲ್ಲಿ ಹೋಬಳಿಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಸೇರಿದಂತೆ 11 ಪ್ರೌಢಶಾಲೆಗಳಿಂದ 350 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ಯಾಮಲಾ, ಕಸಾಪ ಹೋಬಳಿ ಅಧ್ಯಕ್ಷ ಪ್ರಮೋದ್, ಮುಖ್ಯಶಿಕ್ಷಕರಾದ ಪಾವರ್ತಮ್ಮ, ಮುಖಂಡರಾದ ಪುರುಷೋತ್ತಮ, ಧರ್ಮರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net