

ಚಿತ್ರದುರ್ಗ: ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ನಗರದ ನಗರದ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
ವಾಲಿಬಾಲ್-ಬಾಲಕರ, ಥ್ರೋಬಾಲ್-ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಸ್ವಾತಂತ್ರೊೃೀತ್ಸವ ಹಿನ್ನೆಲೆಯಲ್ಲಿ ಸ್ಟೋನ್ ಬಾಯ್ಸ ಫುಟ್ಬಾಲ್ ಕ್ಲಬ್ ಆಯೋಜಿಸಿದ್ದ ಇಂಡಿಪೆಂಡೆನ್ಸ್ ಕಪ್ ಪಂದ್ಯಾವಳಿಯಲ್ಲೂ ಶಾಲೆಯ ಸಿಬಿಎಸ್‌ಇ ತಂಡಕ್ಕೆ ದ್ವಿತೀಯ ಸ್ಥಾನ ಲಭಿಸಿದೆ.
ವಿದ್ಯಾರ್ಥಿಗಳ ಸಾಧನೆಗೆ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಿಇಒ ಎಂ.ಸಿ.ರಘುಚಂದನ್, ಆಡಳಿತಾಧಿಕಾರಿ ಎಚ್.ಚಂದ್ರಕಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.