ಭಾರತೀಯರ ಆವಿಷ್ಕಾರಗಳು ಆಧುನಿಕ ಸಂಶೋಧನೆಗೆ ಪ್ರೇರಣೆ

15 KMT 1
Published on

ಕುಮಟಾ: ಇಲ್ಲಿನ ಕೆನರಾ ಕಾಲೇಜು ಸೊಸೈಟಿ ಅಧೀನದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಭಾರತೀಯ ಜ್ಞಾನ ಪರಂಪರೆ ಮತ್ತು ಆಧುನಿಕ ತಂತ್ರಜ್ಞಾನಕ್ಕೆ ಇರುವ ಸಂಬಂಧಗಳು ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಕೃತ ಉಪನ್ಯಾಸಕ ಡಾ. ನವೀನ್ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವದಲ್ಲಿ ಆಧುನಿಕ ತಂತ್ರಜ್ಞಾನದಲ್ಲಿ ಭಾರತೀಯರ ಹಿಂದಿನ ಜ್ಞಾನವನ್ನು ಬಳಸಿಕೊಂಡಿರುವುದು ಸತ್ಯ. ವೇದಗಳು ಹಾಗೂ ಋಷಿಮುನಿಗಳ ಕಾಲದಿಂದಲೂ ಭಾರತೀಯರು ಆಧ್ಯಾತ್ಮಿಕ ನೆಲೆಗಟ್ಟಿನಲ್ಲಿ ಕಂಡುಕೊಂಡ ಆವಿಷ್ಕಾರಗಳು ಆಧುನಿಕ ಜಗತ್ತಿನ ಸಂಶೋಧನೆಗಳಿಗೆ ಪ್ರೇರಣೆಯಾಗಿದೆ ಎಂದರು.

ರಾಷ್ಟ್ರೋತ್ಥಾನ ಪರಿಷತ್ತಿನ ಸಂಯೋಜಕ ಅಭಿಷೇಕ್, ರಾಷ್ಟ್ರೀಯತೆಯ ಕುರಿತು ಹಾಗೂ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಗೋಪಾಲಕೃಷ್ಣ ಭಟ್ ಮಾತನಾಡಿದರು. ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕ ದಯಾನಂದ ಶೇಟ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net