ವಿಜ್ಞಾನ, ತಂತ್ರಜ್ಞಾನದ ಮೇಲೆ ಭಾರತೀಯ ಗಣಿತ ಶಾಸ್ತ್ರವು ಪ್ರಭಾವ ಅಪಾರ

ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಬುಧವಾರ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತೀಯ ಗಣಿತಶಾಸ್ತ್ರ ವಿಷಯದ ಕುರಿತು ಆಯೋಜಿಸಿದ್ದ ರಾಜ್ಯಮಟ್ಟದ ವಿಚಾರಸಂಕಿರಣವನ್ನು ಮೈಸೂರು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ನಿವೃತ್ತ ಅಧ್ಯಕ್ಷ ಡಾ. ಆರ್ ರಂಗರಾಜನ್ ಉದ್ಘಾಟಿಸಿದರು. ಪ್ರೊ.ಡಾ. ಎಂ. ರೂಬಿ ಸಾಲೆಸ್ಟಿನಾ, ಡಾ.ರೇಚಣ್ಣ, ಪ್ರತಿಭಾ ಅರಸ್ ಹಾಗೂ ಇತರರು ಇದ್ದರು.

Published on: 

ಮೈಸೂರು: ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ಭಾರತೀಯ ಗಣಿತ ಶಾಸ್ತ್ರವು ಅಪಾರ ಪ್ರಭಾವ ಬೀರಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ನಿವೃತ್ತ ಅಧ್ಯಕ್ಷ ಡಾ. ಆರ್ ರಂಗರಾಜನ್ ಅಭಿಪ್ರಾಯಪಟ್ಟರು.

ನಗರದ ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗಣಿತಶಾಸ್ತ್ರ ವಿಭಾಗದ ವತಿಯಿಂದ ಬುಧವಾರ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತೀಯ ಗಣಿತಶಾಸ್ತ್ರ ವಿಷಯದ ಕುರಿತು ಆಯೋಜಿಸಿದ್ದ ರಾಜ್ಯಮಟ್ಟದ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ಭಾರತೀಯ ಗಣಿತ ಶಾಸ್ತ್ರವು ಅಪಾರ ಪ್ರಭಾವ ಬೀರಿದೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸ್ವಯಂ ಕಲಿಕೆಯನ್ನು ಪ್ರೇರೇಪಿಸಬೇಕು. ವಿದ್ಯಾರ್ಥಿಗಳು ಕೇವಲ ಕಂಠಪಾಠ ಮಾಡುವುದರ ಬದಲಾಗಿ ಸೈದ್ಧಾಂತಿಕ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಆರ್ಯಭಟ, ಬ್ರಹ್ಮಗುಪ್ತ, ಭಾಸ್ಕರಾಚಾರ್ಯ ಮತ್ತು ಶ್ರೀನಿವಾಸ ರಾಮಾನುಜನ್ ಅವರಂತಹ ಮಹಾನ್ ಭಾರತೀಯ ಗಣಿತಜ್ಞರು ಗಣಿತಶಾಸ್ತ್ರದ ಮೂಲ ಪರಿಕಲ್ಪನೆಗಳು ಹಾಗೂ ಅನ್ವಯಿಕೆಗಳನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.

ಯುವರಾಜ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಡಾ. ಎಂ. ರೂಬಿ ಸಾಲೆಸ್ಟಿನಾ ಮಾತನಾಡಿ, ಸಂಖ್ಯಾಶಾಸ್ತ್ರದ ಜ್ಞಾನವಿಲ್ಲದೆ ಆಧುನಿಕ ಜೀವನ ಅಸಾಧ್ಯ. ವಿದ್ಯಾರ್ಥಿಗಳು ಕೇವಲ ಬಾಹ್ಯ ಅನ್ವಯಿಕೆಗಳ ಬೆನ್ನು ಬೀಳದೆ, ಮೂಲ ತಾರ್ಕಿಕ ಚಿಂತನೆ ಮತ್ತು ತಾರ್ಕಿಕ ಆಧಾರಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ರೇಚಣ್ಣ ಅಧ್ಯಕ್ಷತೆ ವಹಿಸಿದ್ದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರತಿಭಾ ಅರಸ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net