ಲಿಂಗ ಸಮಾನತೆಗೆ ಹೆಚ್ಚಿನ ಒತ್ತು ನೀಡುತ್ತಿದೆ ಭಾರತೀಯ ರೈಲ್ವೆ : ನೈಋತ್ಯ ರೈಲ್ವೆ ಮೈಸೂರು ಡಿಆರ್‌ಎಂ ಶಿಲ್ಪಿ ಅಗರ್ವಾಲ್

womens day
Published on

ಮೈಸೂರು: ಭಾರತೀಯ ರೈಲ್ವೆಯು ಲಿಂಗ ಸಮಾನತೆಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗೀಯ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ಹೇಳಿದರು.

ಮೈಸೂರು ವಿಶ್ವವಿದ್ಯಾಲಯ, ಮಹಿಳಾ ಅಧ್ಯಯನ ಕೇಂದ್ರ, ಸ್ಪರ್ಶ್ ವೇದಿಕೆ, ಮೈಸೂರು ವಿಶ್ವವಿದ್ಯಾಲಯ ಅಧ್ಯಾಪಕರ ಸಂಘ ವತಿಯಿಂದ ನಗರದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ಒಟ್ಟು 850 ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಹಿಳೆಯರು ರೈಲ್ವೆಯಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಟ್ರೈನ್ ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ರೈಲ್ವೆ ಚಾಲನೆ ಸೇರಿದಂತೆ ಹಲವಾರು ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಕುಲಸಚಿವೆ ಎಂ.ಕೆ. ಸವಿತಾ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್. ನಾಗರಾಜ, ಮೈಸೂರು ವಿಶ್ವವಿದ್ಯಾಲಯ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಎಂ.ಪಿ. ಸದಾಶಿವ, ಸ್ಪರ್ಶ್ ಸಮಿತಿ ಅಧ್ಯಕ್ಷೆ ಪ್ರೊ. ಸುತ್ತೂರು ಎಸ್. ಮಾಲಿನಿ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕಿ ಲೋಲಾಕ್ಷಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net