ಭಾರತದ ಸಾಧನೆ ಅನನ್ಯ

12CKD1
Published on

ಚಿಕ್ಕೋಡಿ: ಪ್ರಸ್ತುತ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಭಾರತ ವಿಜ್ಞಾನ ಹಾಗೂ ತಂತ್ರಜ್ಞಾನದ ಜತೆಗೆ ಒಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಹೆಚ್ಚು ಪದಕ ಗಳಿಸುವ ಮೂಲಕ ರಾಷ್ಟ್ರದ ಗೌರವ ಹೆಚ್ಚಿಸಿರುವುದು ಹೆಮ್ಮೆಯ ಸಂಗತಿ ಎಂದು ಪಪೂ ಕಾಲೇಜುಗಳ ಉಪನಿರ್ದೇಶಕ ಪಿ.ಐ.ಭಂಡಾರಿ ಹೇಳಿದರು.

ಪಟ್ಟಣದಲ್ಲಿ ಶೈಕ್ಷಣಿಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ದೈಹಿಕ ಉಪನ್ಯಾಸಕರ ಸಂಘ ಹಾಗೂ ಬಸವಪ್ರಭು ಕೋರೆ ಮಹಾವಿದ್ಯಾಲಯದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2024-25ನೇ ಸಾಲಿನ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಪದಕ ಗಳಿಸಿದ ಕ್ರೀಡಾಪಟುಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಾ.ಬಿ.ಜಿ.ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಜತೆಗೆ ಕ್ರೀಡೆಯು ಪ್ರಮುಖ ಪಾತ್ರವಹಿಸುತ್ತದೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣೆಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ತಿಳಿಸಿದರು.

ಪ್ರಾಚಾರ್ಯ ಪ್ರಕಾಶ ಕೋಳಿ ಮಾತನಾಡಿ, ಕ್ರೀಡಾ ಚಟುವಟಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವಾರು ಯೋಜನೆ ರೂಪಿಸಿವೆ. ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆಗೈದ ಒಟ್ಟು 68 ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಹುದ್ದಾರ, ಕಾರ್ಯದರ್ಶಿ ಅಜಯ ಮೋನೆ, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ ವಾಘ್ಮೋರೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net