ಭಾರತಕ್ಕೆ ಸಂವಿಧಾನವೇ ಶ್ರೀರಕ್ಷೆ

26-kgl-4
Published on


ಚಾಮರಾಜನಗರ:ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಡಿ ಭಾರತ ಸುಭದ್ರವಾಗಿ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಜಿ.ಸಿ. ಕಿರಣ್ ಹೇಳಿದರು.


ಸಂವಿಧಾನ ದಿನಾಚರಣೆ ಅಂಗವಾಗಿ ಭಾನುವಾರ ಕೊಳ್ಳೇಗಾಲ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದರು.


ಸಂವಿಧಾನದಲ್ಲಿ ದೇಶದ ಎಲ್ಲ ನಾಗರಿಕರಿಗೂ ಸಮಾನ ಹಕ್ಕು ನೀಡಲಾಗಿದೆ. ಆದರೆ, ಸಂವಿಧಾನದ ಮೂಲ ಕೃತಿಯನ್ನು ಬದಲಾದ ಹಲವು ಸರ್ಕಾರಗಳು ಪ್ರಾದೇಶಿಕತೆ ಮತ್ತು ಜನಸಂಖ್ಯೆಗೆ ಅನುಗುಣವಾಗಿ ತಿದ್ದುಪಡಿ ಮಾಡಿವೆ ಎಂದು ಮಾಹಿತಿ ನೀಡಿದರು.


ನಗರಸಭೆ ಸದಸ್ಯೆ ಜಯಮೇರಿ, ಮಹಾನಾಯಕ ಆಟೋ ಚಾಲಕ ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಹರೀಶ್, ಗೌರವಾಧ್ಯಕ್ಷ ಬಿ.ಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net