

ಕಾರ್ಕಳ: ಇಂದಿನ ಜಾಗತಿಕ ಹಣಕಾಸು ಕ್ಷೇತ್ರಕ್ಕೆ ಹೋಲಿಸಿದರೆ, ಭಾರತದ ಯುಪಿಐ, ಡಿಜಿಟಲ್ ಪಾವತಿ ಸಕ್ರಿಯತೆ ಸೇರಿದಂತೆ ಇತರ ಆವಿಷ್ಕಾರಗಳು ಜಗತ್ತಿಗೆ ವಾದರಿಯಾಗಿವೆ ಎಂದು ಜಾಗತಿಕ ಪ್ರಮುಖ ಹಣಕಾಸು ಸಂಸ್ಥೆಯಾದ ನ್ಯೂಯಾರ್ಕ್‌ನ ಜೆ.ಪಿ.ಮೋರ್ಗನ್ ಸಂಸ್ಥೆ ಮುಖ್ಯ ತಾಂತ್ರಿಕ ಅಧಿಕಾರಿ ಸುರೇಶ್ ಶೆಟ್ಟಿ ಹೇಳಿದರು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ 2025ನೇ ಸಾಲಿನ ಬಿಇ ವಿದ್ಯಾರ್ಥಿಗಳ ಪದವಿ ಪ್ರದಾನ ಸವಾರಂಭದ ಮೊದಲ ಆವೃತಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಂತ್ರಿಕ ಶಿಕ್ಷಣ ವಿಭಾಗ ಉಪಾಧ್ಯಕ್ಷ ಡಾ.ಗೋಪಾಲ್ ಮುಗೆರಾಯ ಅಧ್ಯಕ್ಷತೆ ವಹಿಸಿ ವಾತನಾಡಿದರು. ನಿಟ್ಟೆ ವಿ.ವಿ. ಕುಲಸಚಿವ ಡಾ.ಹರ್ಷ ಹಾಲಹಳ್ಳಿ ಮಾತನಾಡಿದರು.
ಉಪಪ್ರಾಂಶುಪಾಲ ಡಾ.ನಾಗೇಶ್ ಪ್ರಭು, ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್‌ನ ಪರೀಕ್ಷಾ ನಿಯಂತ್ರಕ ಡಾ.ಸುಬ್ರಹ್ಮಣ್ಯ ಭಟ್, ಉಪಕುಲ ಸಚಿವೆ ಡಾ.ರೇಖಾ ಭಂಡಾರ್ಕಾರ್, ನಿಟ್ಟೆ ತಾಂತ್ರಿಕ ಕಾಲೇಜಿನ ಇಂಡಸ್ಟ್ರೀ ಇನ್‌ಸ್ಟಿಟ್ಯೂಟ್ ಇಂಟರಾಕ್ಷನ್‌ನ ನಿರ್ದೇಶಕ ಡಾ.ಪರಮೇಶ್ವರನ್, ಸ್ಟೂಡೆಂಟ್ ವೆಲ್ಫೇರ್ ಡೀನ್ ಡಾ.ನರಸಿಂಹ ಬೈಲಕೇರಿ, ಆರ್-ಡಿ ಡೀನ್ ಡಾ.ಸುದೇಶ್ ಬೇಕಲ್, ವಿಟಿಯು ಸ್ಕೀಮ್‌ನ ಪರೀಕ್ಷಾ ನಿಯಂತ್ರಕ ಡಾ.ಶ್ರೀನಿವಾಸ್ ರಾವ್ ಬಿ.ಆರ್. ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಸ್ವಾಗತಿಸಿದರು. ಡೀನ್ ಎಕಾಡೆಮಿಕ್ಸ್ ಡಾ.ಐ.ಆರ್ ಮಿತ್ತಂತಾಯ ಪದಕ ವಿಜೇತ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಸಹಾಯಕ ಪರೀಕ್ಷಾ ನಿಯಂತ್ರಕ ಡಾ.ವೆಂಕಟೇಶ್ ಕಾಮತ್ ವಂದಿಸಿದರು. ವಿದ್ಯಾರ್ಥಿನಿಯರಾದ ನಿಹಾರಿಕಾ ಹಾಗೂ ಶ್ರದ್ಧಾ ಶೇಟ್ ಪ್ರಾರ್ಥಿಸಿದರು. ವಾಸ್ಟರ್ ಆಫ್ ಕಂಪ್ಯೂಟರ್ ಎಪ್ಲಿಕೇಶನ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೇಮಿತಾ ಕಾಮತ್ ನಿರೂಪಿಸಿದರು.
ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳನ್ನು ಚಿನ್ನ, ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು. ಬಿಇ ಪದವೀಧರರಾದ ಬಯೋಟೆಕ್ನಾಲಜಿ, ಸಿವಿಲ್ ಇಂಜಿನಿಯರಿಂಗ್, ಕಂಪ್ಯೂಟರ್ ಆ್ಯಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ರೊಬೋಟಿಕ್ಸ್ ಆ್ಯಂಡ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ವಾಡಲಾಯಿತು.