ಭಾರತದ ಸುಸ್ಥಿರ ಅಭಿವೃದ್ಧಿ ವಿಶ್ವಕ್ಕೆ ಮಾದರಿ : ಶೈಲೇಶ್ ಹರಿಭಕ್ತಿ ಮೆಚ್ಚುಗೆ

mysore university
Published on

ಮೈಸೂರು: ಭಾರತ ಅನುಷ್ಠಾನಗೊಳಿಸಿರುವ ಸುಸ್ಥಿರ ಅಭಿವೃದ್ಧಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಜ್ಞಾನ ಪಾಲುದಾರಿಕೆ ಸಮ್ಮೇಳನದ ಸಮನ್ವಯಾಧಿಕಾರಿ ಶೈಲೇಶ್ ಹರಿಭಕ್ತಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ವಿಶ್ವ ವಿದ್ಯಾಲಯ, ಬಿ.ಎನ್. ಬಹದ್ದೂರ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸೈನ್ಸ್ (ಬೀಮ್ಸ್) ವತಿಯಿಂದ ಮಾನಸ ಗಂಗೋತ್ರಿಯ ರಾಣಿ ಬಹದ್ದೂರು ಸಭಾಂಗಣದಲ್ಲಿ ಶುಕ್ರವಾರ ‘ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಜ್ಞಾನ ಪಾಲು ದಾರಿಕೆ’ ವಿಷಯದ ಕುರಿತು ಹಮ್ಮಿಕೊಂಡಿದ್ದ ಸಮ್ಮೇಳನದಲ್ಲಿ ಮಾತನಾಡಿದರು.

ದೇಶದಲ್ಲಿ ಕಳೆದ ಮೂರು ವರ್ಷದ ಹಿಂದೆ ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮಗಳು ಮುನ್ನಲೆಗೆ ಬಂದವು. ಆದರೆ, ನಂತರ ಇದು ನಿಧಾನಗತಿಯಲ್ಲಿ ಸಾಗಲು ಪ್ರಾರಂಭವಾಯಿತು. ಆದರೆ, ಇದೀಗ ಮತ್ತೆ ಸುಸ್ಥಿರತೆ ಬಗ್ಗೆ ಹೆಚ್ಚಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಸಂತಸದ ವಿಚಾರ ಎಂದರು.

ಸುಸ್ಥಿರ ಅಭಿವೃದ್ಧಿಗೆ ಭಾರತ ಒಂದು ಕಾರ್ಯ ಯೋಜನೆ ಜಾರಿಗೆ ತಂದಿದೆ. ಇದು ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು. ಐಟಿ ಸೆಕ್ಟರ್‌ನಲ್ಲಿ ಶೇ.50 ರಷ್ಟು ಸೇವೆ ಕಾರ್ಬನ್‌ನಿಂದ ಮುಕ್ತವಾಗಿದ್ದು, ಹಸಿರೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಪರಿಸರ ಸ್ನೇಹಿ ವಲಯ ಎಲ್ಲ ಕ್ಷೇತ್ರದಲ್ಲೂ ಬರಬೇಕು ಎಂದು ಅಭಿಪ್ರಾಯಪಟ್ಟರು.

ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್, ಕುಲಸಚಿವ ಪ್ರೊ.ಆರ್. ಶಿವಪ್ಪ, ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಆಯೋಗದ ಏಷ್ಯಾ ವಿಭಾಗದ ಮುಖ್ಯಸ್ಥ ಪ್ರೊ. ಲಾರೆನ್ಸ್ ಸುರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net