

ಮಡಿಕೇರಿ:
ಸ್ವಾತಂತçö್ಯದ ಪರಿಕಲ್ಪನೆಯ ಸಮಗ್ರತೆಯನ್ನು ಅರ್ಥೈಸಿಕೊಂಡು ಯಾವುದೇ ತಾರತಮ್ಯ ಇಲ್ಲದೆ ಎಲ್ಲರೂ ಒಟ್ಟುಗೂಡಿ ಪ್ರಗತಿಯತ್ತ ಚಿಂತನೆ ಮಾಡೋಣ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಕರೆ ನೀಡಿದರು. ಕೊಡಗು ಜಿಲ್ಲಾಡಳಿತದ ವತಿಯಿಂದ ಇಲ್ಲಿನ ಕೋಟೆ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ 79ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರö್ಯ ದಿನದ ಸಂದೇಶ ನೀಡಿ ಮಾತನಾಡಿದರು.
ಸ್ವಾತಂತ್ರö್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ನಾವೆಲ್ಲ ಒಂದಾಗಿ ನಡೆಯಬೇಕಿದೆ. ಭಾರತೀಯ ರಾಷ್ಟಿçÃಯ ಚಳವಳಿಯು ದೇಶದ ಸ್ವಾತಂತ್ರö್ಯ ಹೋರಾಟದ ಮೈಲುಗಲ್ಲಾಗಿದೆ. ಸ್ವಾತಂತ್ರö್ಯ ಚಳವಳಿಯಲ್ಲಿ ಶ್ರಮಿಸಿದ ಕೊಡಗಿನ ಗುಡ್ಡೆಮನೆ ಅಪ್ಪಯ್ಯಗೌಡ, ಪಂದ್ಯAಡ ಬೆಳ್ಯಪ್ಪ, ಸಿ.ಎಂ. ಪೂಣಚ್ಚ, ಕೊಡಂದೇರ ಪೂವಯ್ಯ, ಕೋದಂಡ ಅಪ್ಪಯ್ಯ, ಸಿ.ಎಂ. ವೆಂಕಪ್ಪಯ್ಯ, ಗುಂಡುಗುಟ್ಟಿ ಮಂಜುನಾಥಯ್ಯ, ಎಂ.ಎA. ಸಿದ್ದಿಕ್, ಎಚ್.ಆರ್. ಕೃಷ್ಣಯ್ಯ, ಕೊಳ್ಳಿಮಾಡ ಕರುಂಬಯ್ಯ, ಮಂಡೇಪAಡ ಕಾರ್ಯಪ್ಪ, ಮುಕ್ಕಾಟಿರ ಭೋಜಪ್ಪ, ಮಲ್ಲಂಗಡ ಚಂಗಪ್ಪ, ಮಾರಯ್ಯ ಮೊದಲಾದ ಮಹಾ ನಾಯಕರುಗಳಿಗೆ ಭಕ್ತಿ ಪೂರ್ವಕ ನಮನಗಳನ್ನು ಸಲ್ಲಿಸುವುದು ನಮ್ಮ ಕರ್ತವ್ಯ.
ಬಹು ಹಿಂದಿನಿAದಲೂ ಸ್ವಾತಂತ್ರö್ಯಕ್ಕಾಗಿ ಹೋರಾಟ ಮಾಡುವ ನಾಯಕರನ್ನು ಕೊಡಗು ಕೊಟ್ಟಿದೆ. ಅದೇ ಸಂದರ್ಭದಲ್ಲಿ ಭಾರತೀಯ ಸೈನ್ಯದಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿ ದೇಶಕ್ಕಾಗಿ ಸೇವೆ ಸಲ್ಲಿಸಿದ ಸ್ಮರಣೀಯರನ್ನು ಸಹ ನೀಡಿದೆ. ಈ ಪೈಕಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಭಾರತೀಯ ಸೇನಾ ಇತಿಹಾಸದಲ್ಲಿ ಎಂದಿಗೂ ಮರೆಯಲಾಗದ ರತ್ನಗಳು.
ಈ ಬಾರಿ ಮಡಿಕೇರಿಯ ದೀಪಾ ಬಾಸ್ತಿ ಅನುವಾದಿಸಿದ ಹಾರ್ಟ್ ಲ್ಯಾಂಪ್(ಎದೆಯ ಹಣತೆ) ಕಥಾ ಸಂಕಲನಕ್ಕೆ ಅಂತರರಾಷ್ಟಿçÃಯ ಮಟ್ಟದ ಬೂಕರ್ ಪ್ರಶಸ್ತಿ ದೊರೆತಿದ್ದು, ಕೊಡಗು ಜಿಲ್ಲೆಗೆ ಕೀರ್ತಿಯನ್ನು ತಂದಿದೆ ಎಂದರು.
ಮುಖ್ಯಮAತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರ ಕಳೆದ ಎರಡು ವರ್ಷದಲ್ಲಿ ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ ಹಿತ ಕಾಪಾಡುವಲ್ಲಿ ಶ್ರಮಿಸಿದೆ. ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ತಲಾ ಆದಾಯ ಹೆಚಾಗಿದೆ. ಪ್ರತಿಯೊಬ್ಬರ ಕೊಳ್ಳುವ ಶಕ್ತಿ ವೃದ್ಧಿಸಿದೆ. ಬಡವರ ಸಂಖ್ಯೆ ಮತ್ತು ಅಸಮಾನತೆ ಕಡಿಮೆಯಾಗುತ್ತಿದ್ದು, ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಲಾಗುತ್ತಿದೆ.
ಕುಶಾಲನಗರದಲ್ಲಿ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಈಗಾಗಲೇ ಸಾರ್ವಜನಿಕರಿಗೆ ಸಮರ್ಪಿಸಲಾಗಿದೆ. ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಯೋಜನೆಗಳಿಗೆ ತಲಾ 50 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.
ಕುಶಾಲನಗರ, ಸೋಮವಾರಪೇಟೆ ಹಾಗೂ ಮಡಿಕೇರಿಯಲ್ಲಿ ಹೆಚ್ಚುವರಿಯಾಗಿ ಇಂದಿರಾ ಕ್ಯಾಂಟಿನ್‌ಗಳನ್ನು ಆರಂಭಿಸಲಾಗಿದೆ. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 35 ಕೋಟಿ ರೂ. ಅನುದಾನ ಲಭ್ಯವಿದೆ. ಈ ವರ್ಷ ಕೊಡಗಿನಲ್ಲಿ ಮಳೆ ಸಂದರ್ಭ 3 ಮಾನವ ಪ್ರಾಣ ಹಾನಿ ಸಂಭವಿಸಿದ್ದು, ತಲಾ 5 ಲಕ್ಷ ರೂ. ಪರಿಹಾರ ಸಂಬAಧಪಟ್ಟವರಿಗೆ ಪಾವತಿಸಲಾಗಿದೆ. 41 ಮನೆಗಳು ಪೂರ್ಣ ಹಾನಿಯಾಗಿದ್ದು, ಒಟ್ಟು 49.20 ಲಕ್ಷ ರೂ. ಕೊಡಲಾಗುದೆ. 34 ಮನೆಗಳು ತೀವ್ರಹಾನಿ ಹಾಗೂ 181 ಮನೆಗಳು ಭಾಗಶಃ ಹಾನಿಯಾಗಿದ್ದು ಒಟ್ಟು 22.26 ಲಕ್ಷ ರೂ. ಈಗಾಗಲೇ ಪಾವತಿಸಲಾಗಿರುತ್ತದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ 21 ಜಾನುವಾರುಗಳ ಹಾನಿಯಾಗಿದ್ದು 6.30 ಲಕ್ಷರ ರೂ.ಗಳನ್ನು ಮಾಲೀಕರಿಗೆ ಪಾವತಿಸಲಾಗಿದೆ. ಈ ಬಾರಿ ಪ್ರಾಕೃತಿಕ ವಿಕೋಪವನ್ನು ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸಿದೆ. ಮುಂದಿನ ದಿನಗಳಲ್ಲಿಯೂ ಸಹ ಹೆಚ್ಚಿನ ಮಳೆ ಬಂದಲ್ಲಿ ಮತ್ತಷ್ಟು ಎಚ್ಚರವಹಿಸುವ ನಿಟ್ಟಿನಲ್ಲಿ ಶ್ರಮಿಸಬೇಕಿದೆ ಎಂದರು.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಇತರರು ಇದ್ದರು.
ಮಡಿಕೇರಿಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಮಳೆ ಸುರಿಯುತ್ತಿತ್ತು. ಮಳೆ ಮತ್ತು ಮಂಜು ಮುಸುಕಿದ ವಾತಾವರಣ ಲೆಕ್ಕಿಸದೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಪೋಷಕರು ಸೇರಿದಂತೆ ಸಾರ್ವಜನಿಕರು ಕೋಟೆ ಆವರಣದಲ್ಲಿ ಸೇರಿದ್ದರು. ಪರೇಡ್ ಕಮಾಂಡರ್ ಹೆಚ್.ಬಿ. ಗಣೇಶ್ ನೇತೃತ್ವದಲ್ಲಿ ನಡೆದ ಆಕರ್ಷಕ ಪಥಸಂಚಲನ ಗಮನ ಸೆಳೆಯಿತು. ಪೊಲೀಸ್, ಅರಣ್ಯ, ಸೈನಿಕ ಶಾಲೆ ಹಾಗೂ ವಿವಿಧ ಶಾಲಾ ಕಾಲೇಜು ಸೇರಿದಂತೆ 23 ತಂಡಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು. ನಗರದ ಬೇರೆ ಬೇರೆ ಶಾಲೆಗಳ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. 2 ನೃತ್ಯಗಳು ಹೊರತುಪಡಿಸಿದರೆ ಉಳಿದೆಲ್ಲಾ ನೃತ್ಯಗಳಿಗೆ ಹಿಂದಿ ಹಾಡುಗಳನ್ನು ಬಳಸಿಕೊಳ್ಳಲಾಗಿತ್ತು. ಬಸವನಹಳ್ಳಿ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಬುಡಕಟ್ಟು ಸಾಂಪ್ರದಾಯಿಕ ನೃತ್ಯ ವಿಶೇಷವಾಗಿ ಗಮನ ಸೆಳೆಯಿತು. ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ನಾಡಗೀತೆ, ರೈತಗೀತೆ ಹಾಡಿ ಗಮನ ಸೆಳೆದರು.
ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಸಿಇಟಿ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಇದೇ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಿಸಲಾಯಿತು. ವಿವಿಧ ಕ್ಷೇತ್ರದ ಸಾಧಕರನ್ನೂ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ. ನಾಗೇಶ್ ಮತ್ತು ಅನಿತಾ ಅವರ ನಿರೂಪಣೆಯೂ ಕಾರ್ಯಕ್ರಮದಲ್ಲಿ ಗಮನ ಸೆಳೆಯಿತು.