ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಜನ್ಮ ದಿನಾಚರಣೆ

Indira
Published on

ಮಡಿಕೇರಿ:

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 107ನೇ ಜನ್ಮದಿನಾಚರಣೆಯನ್ನು ಮಡಿಕೇರಿ ನಗರ ಕಾಂಗ್ರೆಸ್, ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ನಾಡಿಗೆ ನೀಡಿದ ಕೊಡುಗೆಗಳ ಬಗ್ಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ. ಪಿ. ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ ಯಲ್ಲಪ್ಪ ಮಾತನಾಡಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮುನಿರ್ ಅಹ್ಮದ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ ಇಸ್ಮಾಯಿಲ್, ಸೇವಾದಳ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಕಾರ್ಮಿಕ ಘಟಕ ಜಿಲ್ಲಾ ಅಧ್ಯಕ್ಷ ದಿನೇಶ್, ಮಾಜಿ ಸೈನಿಕರ ಘಟಕದ ಗಣೇಶ್, ಮುಡಾ ಸದಸ್ಯರಾದ ಚಂದ್ರಶೇಖರ್ ಆರ್.ಪಿ., ಮಿನಾಜ್ ಪ್ರವೀಣ್, ನಗರಸಭಾ ನಾಮ ನಿರ್ದೇಶಿತ ಸದಸ್ಯರಾದ ಸದಾ ಮುದ್ದಪ್ಪ, ಜಗದೀಶ್ ಜಿ.ಸಿ. ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net