ಇಂದಿರಾ ಕ್ಯಾಂಟೀನ್ ದೇಶದಲ್ಲಿಯೇ ಮಾದರಿ : ಸಚಿವ ದಿನೇಶ್ ಗುಂಡೂರಾವ್

mng-4june-canteen
Published on


ಮಂಗಳೂರು : ಇಂದಿರಾ ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ , ಉಪಹಾರ ಒದಗಿಸುವ ಮೂಲಕ ಬಡವರಿಗೆ ಮತ್ತು ಕಾರ್ಮಿಕರಿಗೆ ನೈಜ ಲಾಭ ಒದಗಿಸುವ ದೇಶದ ಮಾದರಿ ಕಾರ್ಯಕ್ರಮವಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಬುಧವಾರ ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿ ವಿವಿಧೆಡೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳ ಲಾಭವು ನೇರವಾಗಿ ಬಡವರಿಗೆ ತಲುಪಬೇಕು ಎಂಬುದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಧ್ಯೇಯವಾಗಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಲ್ಯದಲ್ಲಿ ತಾವು ಅನುಭವಿಸಿದ ಹಸಿವಿನ ಸಂಕಟವನ್ನು ಗಮನದಲ್ಲಿಟ್ಟುಕೊಂಡು ಬಡಜನರು ಮತ್ತು ದುರ್ಬಲರು ಹಸಿವಿನಿಂದ ಇರಬಾರದು ಮತ್ತು ಸರ್ಕಾರದ ಯೋಜನೆಗಳ ಲಾಭ ನೇರವಾಗಿ ತಲುಪಬೇಕು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದರು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪ್ರಥಮ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದರು. ರಾಜ್ಯದ ಎಲ್ಲಾ ಪ್ರಮುಖ ಪೇಟೆ ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ 4 ಕಡೆ ಇಂದಿರಾ ಕ್ಯಾಂಟೀನ್ ಮಂಜೂರಾಗಿದ್ದು ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿಯಲ್ಲಿ ಇಂದು ಚಾಲನೆಗೊಂಡಿದೆ. ಬಜಪೆಯಲ್ಲಿ ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಳ್ಳಲಿದೆ ಎಂದು ಅವರು ತಿಳಿಸಿದರು.
ಶಾಸಕ ಉಮಾನಾಥ ಕೋಟ್ಯಾನ್, ಎಂಎಲ್‌ಸಿ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಜಯಲಕ್ಷ್ಮಿ ಮೂಡುಬಿದಿರೆ ಪುರಸಭೆ ಅಧ್ಯಕ್ಷೆ ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net