ಇಂದಿರಾ ಕ್ಯಾಂಟೀನ್ ವಿಸ್ತರಣೆ: ಸಚಿವ ಸಂಪುಟಕ್ಕೆ ಶೀಘ್ರ ಪ್ರಸ್ತಾವನೆ

Vijayavani-Featured-Image
Published on

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆ ಹಾಗೂ ಹಾಲಿಯಿರುವ ಘಟಕಗಳ ವಿಸ್ತರಣೆ ಸಂಬಂಧ ಸಚಿವ ಸಂಪುಟದ ಒಪ್ಪಿಗೆ ಪಡೆದ ಬಳಿಕ ಅಧಿಕೃತವಾಗಿ ಜಾರಿಗೆ ತರಲು ಬಿಬಿಎಂಪಿ ನಿರ್ಧರಿಸಿದೆ.

ಈ ಸಂಬಂಧ ಈಗಾಗಲೇ ವಲಯವಾರು ಟೆಂಡರ್ ಆಹ್ವಾನಿಸಲಾಗಿದೆ. ಹೊಸ ಮೆನು ಹಾಗೂ ಮೂಲಸೌಕರ್ಯ ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಹಿತೆ ಜಾರಿಯಲ್ಲಿರುವ ಕಾರಣಕ್ಕೆ ಟೆಂಡರ್ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಜತೆಗೆ ಹೆಚ್ಚುವರಿ ಹಣ ಪಡೆಯುವುದು ಸೇರಿ ಇನ್ನಿತರ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.

ನೀತಿ ಸಂಹಿತೆ ಪೂರ್ಣಗೊಂಡ ಬಳಿಕ ನಡೆಯಲಿರುವ ಕ್ಯಾಬಿನೆಟ್‌ನಲ್ಲಿ ಇಂದಿರಾ ಕ್ಯಾಂಟೀನ್ ವಿಷಯದ ಕಡತ ಮಂಡನೆಗೊಂಡು ಅನುಮೋದನೆಯಾಗುವ ಸಾಧ್ಯತೆ ಇದೆ. ಆ ಬಳಿಕ ಅಧಿಕೃತವಾಗಿ ಕ್ಯಾಂಟೀನ್‌ಗಳಲ್ಲಿ ಹೊಸ ಮೆನು ಸಿಗಲಿದೆ ಎಂದು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net