

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಹಸಿದವರಿಗೇ ತಿಳಿದರುತ್ತದೆ ಅನ್ನದ ಬೆಲೆ. ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸು. ರಾಜ್ಯದಲ್ಲಿ ಯಾರೂ ಹಸಿವಿನಿಂದಿರಬಾರದು, ಹಸಿವುಮುಕ್ತ ಕರ್ನಾಟಕವಾಗಬೇಕೆಂಬ ದೃಷ್ಟಿಯಲ್ಲಿ ಮಹತ್ವಾಕಾಂಕ್ಷಿ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ ಎಂದು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಕಾಪು ಪ್ರಜಾಸೌಧ ಆವರಣದಲ್ಲಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಶನಿವಾರ ಉದ್ಘಾಟಿಸಿದ ಬಳಿಕ ಮಾತನಾಡಿ, ಗ್ರಾಹಕನೊಬ್ಬನಿಗೆ ಮೂರು ಹೊತ್ತಿಗೆ ಒಟ್ಟು 60 ರೂ.ವೆಚ್ಚ ತಗಲುತ್ತದೆ. ಆದರೆ ಗ್ರಾಹಕನಿಗೆ 5ರಿಂದ 10 ರೂ.ಗೆ ಪೌಷ್ಟಿಕ ಆಹಾರವನ್ನು ಕ್ಯಾಂಟೀನ್‌ನಲ್ಲಿ ನೀಡಲಾಗುತ್ತದೆ ಎಂದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ, ಜಿಪಂ ಸಿಇಒ ಪ್ರತೀಕ್ ಬಾಯಲ್, ತಹಸೀಲ್ದಾರ್ ಪ್ರತಿಭಾ ಆರ್., ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಮುಖ್ಯಾಧಿಕಾರಿ ನಾಗರಾಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್ ಮತ್ತಿತರರಿದ್ದರು.