

ಆನೇಕಲ್: ಪ್ರತಿಯೊಬ್ಬರಿಗೂ ಆಹಾರ ಎನ್ನುವುದು ಜೀವನದಲ್ಲಿ ಅತಿ ಮುಖ್ಯ. ಹಾಗಾಗಿ ಬಡವರು ಹಸಿವಿನಿಂದ ಜೀವಿಸಬಾರದೆಂಬ ಉದ್ದೇಶದಿಂದ ಕ್ಯಾಂಟೀನ್ ಆರಂಭಿಸಲಾಗಿದೆ. ಎಲ್ಲರೂ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಬಿ.ಶಿವಣ್ಣ ಹೇಳಿದರು.
ಚಂದಾಪುರದಲ್ಲಿ ಶುಕ್ರವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿ, ಆನೇಕಲ್, ಅತ್ತಿಬೆಲೆ ಹಾಗೂ ಹೆಬ್ಬಗೋಡಿ ಭಾಗದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಚಂದಾಪುರದಲ್ಲಿ ಶನಿವಾರ ಹಾಗೂ ಇತರ ದಿನ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಈ ಭಾಗದಲ್ಲಿ ಕಾರ್ಮಿಕರು ಹೆಚ್ಚಾಗಿರುವ ಕಾರಣ ಇಂದಿರಾ ಕ್ಯಾಂಟೀನ್ ವರದಾನವಾಗಲಿದೆ ಎಂದರು.
ಕಾಂಗ್ರೆಸ್ ಮುಖಂಡ ಗೋಪಾಲ್ ರೆಡ್ಡಿ ಮಾತನಾಡಿ, ಶಾಸಕ ಬಿ.ಶಿವಣ್ಣ ೇತ್ರದಲ್ಲಿ ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ಚಂದಾಪುರದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಿ, ಈ ಭಾಗದ ಕಾರ್ಮಿಕರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.
ಚಂದಾಪುರ ಪುರಸಭೆಯ ಜನಪ್ರತಿನಿಧಿಗಳು, ಪುರಸಭೆ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ನಾವು ಅಧಿಕಾರದ ಆಸೆಗಾಗಿ ಸುಳ್ಳು ಹೇಳಿ ಜನರನ್ನು ವಂಚಿಸುವುದಿಲ್ಲ. ಬಿಜೆಪಿಯವರಿಗೆ ಅಭಿವೃದ್ಧಿ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣ ಮಾಡುವುದೇ ಚಿಂತೆ. ಎಲ್ಲ ವರ್ಗದ ಜನರಿಗೆ ಒಳ್ಳೆಯದಾಗಬೇಕಿದೆ.
- ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ